ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬಸ್-ಟ್ರಕ್ ನಡುವೆ ಡಿಕ್ಕಿ, 7 ಮಂದಿ ದುರ್ಮರಣ
ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

ಭಿಂದ್: ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಭಿಂದ್ ಜಿಲ್ಲೆಯ ವೀರ್ ಖಾದಿ ಗ್ರಾಮದ ಬಳಿ ಬಸ್ ಹಾಗೂ ಕಂಟೈನರ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯರು ಮಾಹಿತಿ ನೀಡಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಅಪಘಾತದಲ್ಲಿ ಗಾಯಗೊಂಡವರ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕ ವಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳದಿಂದ 79 ಕಿಲೋ ಮೀಟರ್ ದೂರದಲ್ಲಿರುವ ಗ್ವಾಲಿಯರ್ ನ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರು ಗ್ವಾಲಿಯರ್ ನಿಂದ ಮಧ್ಯಪ್ರದೇಶದ ಬರೇಲಿ ಪಟ್ಟಣಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಅಪಘಾತಕ್ಕೆ ಕಾರಣನಾದ ಚಾಲಕನನ್ನು ಬಂಧಿಸಿ ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಮನೋಜ್ ಸಿಂಗ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


