ಕೇರಳದಲ್ಲಿಂದು ಕೊರೋನಾ ಗೆ 123 ಬಲಿ; 13,217 ಹೊಸ ಪ್ರಕರಣ ಪತ್ತೆ
ಕೇರಳದಲ್ಲಿಂದು ಕೊರೋನಾಗೆ 121 ಸೋಂಕಿತರು ಬಲಿಯಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 25, 303ಕ್ಕೆ ಏರಿಕೆಯಾಗಿದೆ. ಶನಿವಾರ ಹೊಸದಾಗಿ 13, 217 ಪ್ರಕರಣ ಪತ್ತೆಯಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 47,07,936ಕ್ಕೆ ಏರಿಕೆಯಾಗಿದೆ.

ತಿರುವನಂತಪುರಂ: ಕೇರಳದಲ್ಲಿಂದು ಕೊರೋನಾಗೆ 121 ಸೋಂಕಿತರು ಬಲಿಯಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 25, 303ಕ್ಕೆ ಏರಿಕೆಯಾಗಿದೆ. ಶನಿವಾರ ಹೊಸದಾಗಿ 13, 217 ಪ್ರಕರಣ ಪತ್ತೆಯಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 47,07,936ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 96,835 ಮಾದರಿಗಳನ್ನು ಪರೀಕ್ಷಿಸಲಾಗಿದೆ. ರಾಜ್ಯದಲ್ಲಿ ಸದ್ಯ 1,41,155 ಸಕ್ರಿಯ ಪ್ರಕರಣಳಿರುವುದಾಗಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಮಧ್ಯೆ 14, 437 ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟಾರೇ ಗುಣಮುಖರಾದವರ ಸಂಖ್ಯೆ 45, 40, 866ಕ್ಕೆ ಏರಿಕೆಯಾಗಿದೆ. 85 ಆರೋಗ್ಯ ಕಾರ್ಯಕರ್ತರು ಕೂಡಾ ಸೋಂಕಿಗೆ ತುತ್ತಾಗಿದ್ದಾರೆ.
17,308 ಸೋಂಕಿತರು ವಿವಿಧ ಆಸ್ಪತ್ರೆಗಳ ಐಸೋಲೇಷನ್ ವಾರ್ಡ್ ನಲ್ಲಿದ್ದು, 4,37, 864 ಮಂದಿ ಮೇಲೆ ವೈದ್ಯಕೀಯ ನಿಗಾ ಇಡಲಾಗಿದೆ ಎಂದು ಹೇಳಿಕೆಯಲ್ಲಿ ಮಾಹಿತಿ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


