ರೀಟ್ ಹಗರಣ: ಬಿಜೆಪಿ ಆಡಳಿತದಲ್ಲಿ ಪರೀಕ್ಷೆಗಳಲ್ಲಿ ವ್ಯಾಪಕ ವಂಚನೆ- ದೋಟಾಸ್ರಾ ವಾಗ್ದಾಳಿ
ರಾಜಸ್ಥಾನದಲ್ಲಿ ಬಿಜೆಪಿ ಪಕ್ಷದ ಆಡಳಿತದ ಅವಧಿಯಲ್ಲಿ ಗ್ಯಾಂಗ್‌ಗಳು ಪ್ರವರ್ಧಮಾನಕ್ಕೆ ಬಂದಿದ್ದು, ಪರೀಕ್ಷೆಗಳಲ್ಲಿ ವ್ಯಾಪಕ ವಂಚನೆ ನಡೆದಿರುವುದಾಗಿ ರಾಜಸ್ಥಾನ್ ಶಾಲಾ ಶಿಕ್ಷಣ ಸಚಿವ ಗೋವಿಂದ್ ಸಿಂಗ್ ದೋಟಾಸ್ರಾ ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ಜೈಪುರ: ರಾಜಸ್ಥಾನದಲ್ಲಿ ಬಿಜೆಪಿ ಪಕ್ಷದ ಆಡಳಿತದ ಅವಧಿಯಲ್ಲಿ ಗ್ಯಾಂಗ್‌ಗಳು ಪ್ರವರ್ಧಮಾನಕ್ಕೆ ಬಂದಿದ್ದು, ಪರೀಕ್ಷೆಗಳಲ್ಲಿ ವ್ಯಾಪಕ ವಂಚನೆ ನಡೆದಿರುವುದಾಗಿ ರಾಜಸ್ಥಾನ್ ಶಾಲಾ ಶಿಕ್ಷಣ ಸಚಿವ ಗೋವಿಂದ್ ಸಿಂಗ್ ದೋಟಾಸ್ರಾ ಶನಿವಾರ ವಾಗ್ದಾಳಿ ನಡೆಸಿದ್ದಾರೆ.
ರಾಜಸ್ಥಾನ ಶಿಕ್ಷಕರ ಅರ್ಹತಾ ಪರೀಕ್ಷೆ (REET) ನಡೆಸುವಲ್ಲಿ ಬಿಜೆಪಿ ಯುವಕರನ್ನು ದಾರಿ ತಪ್ಪಿಸುತ್ತಿದೆ ಎಂದು ಆರೋಪಿದ ಸಚಿವರು, ಯಾವುದೇ ಅಕ್ರಮ ಕಂಡುಬಂದಲ್ಲಿ ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನಿವಾಸದಲ್ಲಿ "ಪ್ರಶಾಸನ್ ಶಹರೋನ್, ಗಾಂವ್ ಕೆ ಸಾಂಗ್" ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ದೋಟಾಸ್ರಾ, ಶಿಕ್ಷಣ ಇಲಾಖೆಯಲ್ಲಿ ಇತರ 29,000 ಹುದ್ದೆಗಳಿಗೆ ನೇಮಕಾತಿಗೆ ಈ ತಿಂಗಳು ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದರು.
ರೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಅಕ್ರಮದ ಆರೋಪದ ಬೆನ್ನಲ್ಲೇ ಸಚಿವರು ಈ ರೀತಿಯ ಹೇಳಿಕೆ ನೀಡಿದ್ದಾರೆ. ಈ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ಬಿಜೆಪಿ ಈಗಾಗಲೇ ಒತ್ತಾಯಿಸಿದೆ.
ಪ್ರತಿಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ದೋಟಾಸ್ರಾ, ಸರ್ಕಾರದಿಂದ ಪರೀಕ್ಷೆಗಾಗಿ ಸೂಕ್ತ ವ್ಯವಸ್ಥೆ ಮಾಡಿದ್ದರಿಂದ ಅವರು ಅಸಮಾಧಾನಗೊಂಡಿದ್ದಾರೆ. ಹಿಂದೆ ಬಿಜೆಪಿ ಆಡಳಿತ ಅವಧಿಯಲ್ಲಿ ಪರೀಕ್ಷೆಯಲ್ಲಿ ವಂಚನೆ ಕಂಡುಹಿಡಿಯಲು ಸರ್ಕಾರ ಸೂಕ್ತ ಕ್ರಮ ಕೈಗೊಂಡಿರಲಿಲ್ಲ ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


