ದೇಶ

ಶೌಚಾಲಯ ಬಳಕೆ ವಿಷಯವಾಗಿ ಕಲ್ಲು ತೂರಾಟ ಮೂವರಿಗೆ ಗಾಯ: 9 ಮಂದಿ ಬಂಧನ 

ಶೌಚಲಾಯ ಬಳಕೆಯ ವಿಷಯವಾಗಿ ಎರಡು ಗುಂಪುಗಳ ನಡುವೆ ಪರಸ್ಪರ ಕಲ್ಲು ತೂರಾಟ ನಡೆದಿದ್ದು, ಮೂವರಿಗೆ ತೀವ್ರ ಗಾಯಗಳಾಗದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿಯನ್ನು ಬಂಧಿಸಲಾಗಿದೆ.

ಶೌಚಾಲಯ ಬಳಕೆ ವಿಷಯವಾಗಿ ಕಲ್ಲು ತೂರಾಟ ಮೂವರಿಗೆ ಗಾಯ: 9 ಮಂದಿ ಬಂಧನ 
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಶೌಚಲಾಯ ಬಳಕೆಯ ವಿಷಯವಾಗಿ ಎರಡು ಗುಂಪುಗಳ ನಡುವೆ ಪರಸ್ಪರ ಕಲ್ಲು ತೂರಾಟ ನಡೆದಿದ್ದು, ಮೂವರಿಗೆ ತೀವ್ರ ಗಾಯಗಳಾಗದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿಯನ್ನು ಬಂಧಿಸಲಾಗಿದೆ.

ಬುದ್ಧ್ ಬಜಾರ್ ಸ್ಲಮ್, ಗೀತ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಪಿಸಿಆರ್ ಗೆ ಘಟನೆ ಕುರಿತು ಮಾಹಿತಿ ನೀಡಲಾಗಿತ್ತು. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅವರು ಆರೋಪಿಗಳನ್ನು ಬಂಧಿಸಿದ್ದಾರೆ. 

ಶೌಚಾಲಯದ ಬಳಿ ಇದ್ದ ಗುಂಪು ಹಾಗೂ ಸ್ವಲ್ಪ ದೂರದಲ್ಲಿದ್ದ ಮತ್ತೊಂದು ಶೌಚಾಲಯ ಪರಸ್ಪರ ಕಲ್ಲು ತೂರಾಟ ಮಾಡಿಕೊಂಡಿವೆ.

ಶೌಚಾಲಯ ಬಳಕೆ ವಿಷಯವಾಗಿ ಜಗಳವಾಗಿದ್ದು, ಎರಡೂ ಗುಂಪುಗಳು ಕಠಿಣ ಶಬ್ದಗಳನ್ನು ಪ್ರಯೋಗಿಸಿರುವ ಆರೋಪವನ್ನು ಪರಸ್ಪರ ಮಾಡಿವೆ ಎಂದು ಪೊಲೀಸರು ಹೇಳಿದ್ದಾರೆ. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.