ದೇಶ

ಉತ್ತರ ಪ್ರದೇಶ: ಪ್ರತಿಭಟನಾನಿರತ ರೈತರ ಮೇಲೆ ಕಾರುಗಳು ಹರಿದು ಅನೇಕ ಮಂದಿಗೆ ಗಾಯ!

ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಭೇಟಿ ವಿರೋಧಿಸಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ಕೃಷಿ ವಿರೋಧಿ ಕಾನೂನು ಪ್ರತಿಭಟನಾಕಾರರ ಗುಂಪೊಂದರ ಮೇಲೆ ಎರಡು ಕಾರನ್ನು ಹರಿಸಿದ ನಂತರ ಹಿಂಸಾಚಾರ ಭುಗಿಲೆದ್ದಿತ್ತು.

ಉತ್ತರ ಪ್ರದೇಶ: ಪ್ರತಿಭಟನಾನಿರತ ರೈತರ ಮೇಲೆ ಕಾರುಗಳು ಹರಿದು ಅನೇಕ ಮಂದಿಗೆ ಗಾಯ!
ಕಾರು ಹರಿದ ನಂತರ ಗಾಯಗೊಂಡಿರುವ ರೈತರು
Published On :

ಲಖಿಂಪುರ ಖೇರಿ: ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಭೇಟಿ ವಿರೋಧಿಸಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ಕೃಷಿ ವಿರೋಧಿ ಕಾನೂನು ಪ್ರತಿಭಟನಾಕಾರರ ಗುಂಪೊಂದರ ಮೇಲೆ ಎರಡು ಕಾರನ್ನು ಹರಿಸಿದ ನಂತರ ಹಿಂಸಾಚಾರ ಭುಗಿಲೆದ್ದಿತ್ತು. 

ಈ ಘಟನೆಯಿಂದಾಗಿ ಅನೇಕ ಮಂದಿ ರೈತರು ತೀವ್ರ ರೀತಿಯಲ್ಲಿ ಗಾಯಗೊಂಡಿರುವುದಾಗಿ ದೃಢಪಡಿಸದ ವರದಿಗಳು ಹೇಳಿವೆ. ಉದ್ರಿಕ್ತಗೊಂಡ ಪ್ರತಿಭಟನಾಕರರು ಎರಡು ಕಾರುಗಳನ್ನು ತಡೆದು ಬೆಂಕಿ ಹಚ್ಚಿದ್ದಾರೆ. ಈ ಘಟನೆಯಲ್ಲಿ ಅನೇಕ ಪತ್ರಕರ್ತರು ಕೂಡಾ ತೀವ್ರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

 ಈ ಹಿಂಸಾಚಾರ ವರದಿ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಮೌರ್ಯ ಬನ್ಬೀರ್‌ಪುರ ಗ್ರಾಮಕ್ಕೆ ಭೇಟಿ ನೀಡುವುದನ್ನು ರದ್ದುಪಡಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.