ಲಖಿಂಪುರ್ ಖೇರಿ ಹಿಂಸಾಚಾರ: ಪ್ರಿಯಾಂಕಾ ಗಾಂಧಿ, ದೀಪೇಂದ್ರ ಹೂಡಾ ವಶಕ್ಕೆ; ಅಖಿಲೇಶ್, ಎಸ್'ಸಿ ಮಿಶ್ರಾ ಗೆ ಲಖನೌನಲ್ಲಿ ಪೊಲೀಸರ ತಡೆ
ರೈತರ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರದಲ್ಲಿ ಬಲಿಯಾದ ಎಂಟು ಮಂದಿಯ ಕುಟುಂಬಗಳನ್ನು ಭೇಟಿಯಾಗಲು ಅನುಮತಿ ನೀಡದ ಪೊಲೀಸರು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರೆ ನಾಯಕರನ್ನು ಸೀತಾಪುರದಲ್ಲಿ ಬಂಧನಕ್ಕೊಳಪಡಿಸಿದ್ದಾರೆಂದು ಸೋಮವಾರ ತಿಳಿದುಬಂದಿದೆ.

ಲಖಿಂಪುರ್ ಖೇರಿ: ಕೃಷಿ ಕಾಯ್ದೆಗಳ ವಿರುದ್ಧ ಭಾನುವಾರ ರೈತರ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರದಲ್ಲಿ ಬಲಿಯಾದ ಎಂಟು ಮಂದಿಯ ಕುಟುಂಬಗಳನ್ನು ಭೇಟಿಯಾಗಲು ಅನುಮತಿ ನೀಡದ ಪೊಲೀಸರು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರೆ ನಾಯಕರನ್ನು ಸೀತಾಪುರದಲ್ಲಿ ಬಂಧನಕ್ಕೊಳಪಡಿಸಿದ್ದಾರೆಂದು ಸೋಮವಾರ ತಿಳಿದುಬಂದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ಕುಮಾರ್ ಲಲ್ಲು ಅವರು, ಕಾಂಗ್ರೆಸ್ ನಾಯಕರನ್ನು ತಡೆದಿರುವುದು ಫ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿತಾಪುರದಲ್ಲಿ ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಪ್ರಿಯಾಂಕಾ ಗಾಂಧಿ, ದೀಪೇಂದ್ರ ಸಿಂಗ್ ಹೂಡಾ ಹಾಗೂ ಇತರೆ ಕಾಂಗ್ರೆಸ್ ಪಕ್ಷದ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ಲಲ್ಲು ಅವರು ತಿಳಿಸಿದ್ದಾರೆ.
ಲಖಿಂಪುರ್ ಖೇರಿ ಹೊರ ವಲಯದಲ್ಲಿ ನಾವು ನಿಂತು ಕಾಯುತ್ತಿದ್ದೇವೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ನಮ್ಮನ್ನು ತಡೆದರು. ಹಿಂಸಾಚಾರದಲ್ಲಿ ಮೃತರ ಕುಟುಂಬಸ್ಥರನ್ನು ಭೇಟಿ ಮಾಡಲು ನಾವು ತೆರಳಿದ್ದೆವು ಎಂದು ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಧೀರಜ್ ಗುರ್ಜಾರ್ ಅವರು ಹೇಳಿದ್ದಾರೆ.
ತನಿಖೆಗೆ ಮಾಯಾವತಿ ಆಗ್ರಹ
ಈ ನಡುವೆ ಘಟನೆಗೆ ತೀವ್ರ ಬಿಎಸ್'ಪಿ ಮುಖ್ಯಸ್ಥೆ ಮಾಯಾವತಿಯವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ತನಿಖೆಗೆ ಆಗ್ರಹಿಸಿದ್ದಾರೆ.
ಇದೇ ವೇಳೆ ಬಿಎಸ್'ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸಂಸದರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಧರಣಿ ಕುಳಿತ ಅಖಿಲೇಷ್ ಯಾದವ್, ಮೃತರ ಕುಟುಂಬಕ್ಕೆ ರೂ.2 ಲಕ್ಷಕ್ಕೆ ಆಗ್ರಹ
ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಉತ್ತರಪ್ರದೇಶದ ಮುಖ್ಯಂತ್ರಿ ಅಖಿಲೇಶ್ ಯಾದವ್ ಅವರು, ರಸ್ತೆಯಲ್ಲಿ ಧರಣಿ ಕುಳಿತಿದ್ದು ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ನೀಡುವಂತೆತ ಸೋಮವಾರ ಆಗ್ರಹಿಸಿದ್ದಾರೆ.
ಧರಣಿ ವೇಳೆ ಮಾಧ್ಯಮಗಳ ಎದುರು ತಮ್ಮ ಮಾತನಾಡಿರುವ ಮಾಜಿ ಸಿಎಂ ಅಖಿಲೇಶ್ ಯಾದವ್, "ಘಟನೆಗೆ ಕಾರಣರಾದ ಕೇಂದ್ರ ಸಚಿವ ಅಜಯ್ ಮಿಶ್ರಾ ಮತ್ತು ಡಿಸಿಎಂ ಕೇಶವ ಪ್ರಸಾದ್ ಮೌರ್ಯ ಅವರನ್ನು ಕೂಡಲೇ ಆ ಸ್ಥಾನದಿಂದ ಕಿತ್ತೊಗೆಯಬೇಕು. ಅಲ್ಲದೆ, ಘಟನೆಯಲ್ಲಿ ಮೃತಪಟ್ಟ ಅಮಾಯಕ ರೈತರಿಗೆ ಕನಿಷ್ಟ 2 ಕೋಟಿ ಪರಿಹಾರ ನೀಡಬೇಕು" ಎಂದು ಒತ್ತಾಯಿಸಿದ್ದಾರೆ.
ಈ ನಡುವೆ ಸಂತ್ರಸ್ತರ ಮನೆಗಳಿಗೆ ರಾಜಕೀಯ ನಾಯಕರು ಭೇಟಿ ನೀಡಲು ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ವಿಕ್ರಮಾದಿತ್ಯ ಮಾರ್ಗದಲ್ಲಿ ಭಾರಿ ಪ್ರಮಾಣದಲ್ಲಿ ಭದ್ರತೆಯನ್ನು ನಿಯೋಜಿಸಲಾಗಿದೆ. ಪೊಲೀಸರ ವಾಹನಗಳು ರಸ್ತೆಯಲ್ಲಿ ನಿಂತಿತ್ತು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸಿದ್ಧವಾಗಿ ನಿಂತಿದ್ದಾರೆ.
ಇನ್ನು ಘಟನೆ ಬಳಿಕ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಿರುವ ಪೊಲೀಸರು ಇದೀಗ ಸ್ಥಳದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದು, ಸೆಕ್ಷನ್ 144 ಜಾರಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಲ್ಕು ಅಥವಾ ಅದಕ್ಕಿಂತಲೂ ಹೆಚ್ಚು ಜನರು ಒಂದೆಡೆ ಸೇರುವಂತಿಲ್ಲ ಎಂದು ಅಧಿಕಾರಿಗಳು ಸೂಚಿಸಿದ್ದಾರೆ.
ಘಟನೆ ಸಂಬಂಧ ಉತ್ತರಪ್ರದೇಶ ಪೊಲೀಸರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಇದೊಂದು ದುರಾದೃಷ್ಟಕರ ಘಟನೆಯಾಗಿದೆ. ಘಟನೆಯಲ್ಲಿ ಈ ವರೆಗೂ 8 ಮಂದಿ ಸಾವನ್ನಪ್ಪಿದ್ದಾರೆಂದು ಜಿಲ್ಲಾ ಆಡಳಿತ ಮಂಡಳಿ ಮಾಹಿತಿ ನೀಡಿದೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


