ಲಖೀಂಪುರ್ ಹಿಂಸಾಚಾರ: ಮೃತ ರೈತರ ಕುಟುಂಬ ಸದಸ್ಯರನ್ನು ಭೇಟಿಯಾದ ರಾಹುಲ್, ಪ್ರಿಯಾಂಕಾ ನೇತೃತ್ವದ ಕಾಂಗ್ರೆಸ್ ನಿಯೋಗ
ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿನ 8 ಸದಸ್ಯರನ್ನೊಳಗೊಂಡ ಕಾಂಗ್ರೆಸ್ ನಿಯೋಗ ಲಖೀಂಪುರ್ ಖೇರ್ ಹಿಂಸಾಚಾರದಲ್ಲಿ ಮೃತಪಟ್ಟ ರೈತನ ಕುಟುಂಬ ಸದಸ್ಯರನ್ನು ಬುಧವಾರ ಭೇಟಿ ಮಾಡಿ ಸಾಂತ್ವನ ಹೇಳುವುದರೊಂದಿಗೆ ರಾಜಕೀಯ ಇಂಬು ಪಡೆದುಕೊಂಡಿದೆ.

ಲಖನೌ: ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿನ 8 ಸದಸ್ಯರನ್ನೊಳಗೊಂಡ ಕಾಂಗ್ರೆಸ್ ನಿಯೋಗ ಲಖೀಂಪುರ್ ಖೇರ್ ಹಿಂಸಾಚಾರದಲ್ಲಿ ಮೃತಪಟ್ಟ ರೈತನ ಕುಟುಂಬ ಸದಸ್ಯರನ್ನು ಬುಧವಾರ ಭೇಟಿ ಮಾಡಿ ಸಾಂತ್ವನ ಹೇಳುವುದರೊಂದಿಗೆ ರಾಜಕೀಯ ಇಂಬು ಪಡೆದುಕೊಂಡಿದೆ.
ಕಾಂಗ್ರೆಸ್ ನಿಯೋಗ ಮತ್ತಿತರ ಪಕ್ಷಗಳು ತಮ್ಮ ಐದು ಸದಸ್ಯರ ತಂಡ ಲಖೀಂಪುರ್ ಖೇರ್ ಗೆ ಹೋಗಲು ಉತ್ತರ ಪ್ರದೇಶ ಸರ್ಕಾರ ಅವಕಾಶ ನೀಡಿದ ನಂತರ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ರಣದೀಪ್ ಸುರ್ಜೆವಾಲಾ, ಕೆ. ಸಿ. ವೇಣುಗೋಪಾಲ್, ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಲ್ ಬಘೇಲ್ , ರಾಜಸ್ಥಾನ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಛನ್ನಿ, ದೀಪೆಂದರ್ ಹೂಡಾ ಅವರನ್ನೊಳಗೊಂಡ 8 ಸದಸ್ಯರ ತಂಡ ಲಖೀಂಪುರ್ ಗೆ ಭೇಟಿ ನೀಡಿತ್ತು.
ಇದಕ್ಕೂ ಮುನ್ನ ಪ್ರಿಯಾಂಕಾ ಗಾಂಧಿ ಅವರನ್ನು ಸೀತಾಪುರದ ಪಿಎಸಿ ಅತಿಥಿ ಗೃಹದಿಂದ ಬಿಡುಗಡೆ ಮಾಡಲಾಯಿತು. ಭಾನುವಾರ ಸಂಭವಿಸಿದ ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ವರು ರೈತ ಕುಟುಂಬ ಸದಸ್ಯರಿಗೆ 50 ಲಕ್ಷ ರೂ. ಆರ್ಥಿಕ ನೆರವನ್ನು ಛತ್ತೀಸ್ ಗಢ ಹಾಗೂ ಪಂಜಾಬ್ ಮುಖ್ಯಮಂತ್ರಿ ಘೋಷಿಸಿದರು.
Related Article
ಲಖಿಂಪುರ್ ಖೇರಿಯತ್ತ ರಾಹುಲ್ ಗಾಂಧಿ, ಸೀತಾಪುರ ಅತಿಥಿಗೃಹ ತಲುಪಿದ ಕಾಂಗ್ರೆಸ್ ನಾಯಕ
ಲಖಿಂಪುರ್ ಖೇರಿ ಹಿಂಸಾಚಾರ: ಅಮಿತ್ ಶಾ ಭೇಟಿ ಮಾಡಿದ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


