ದೇಶ

ಲಖೀಂಪುರ್ ಹಿಂಸಾಚಾರ: ಗುರುವಾರ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ

ಲಖೀಂಪುರ್ ಖೇರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಗುರುವಾರ ವಿಚಾರಣೆ ನಡೆಯಲಿದೆ. ಗುರುವಾರ ಬೆಳಗ್ಗೆ 11 ಗಂಟೆಗೆ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ. ಉತ್ತರ ಪ್ರದೇಶದ ಲಖೀಂಪುರ್ - ಖೇರ್ ಹಿಂಸಾಚಾರ ಘಟನೆ ಸಂಬಂಧ ಸುಪ್ರೀಂ ಕೋರ್ಟ್ ಬುಧವಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು.

ಲಖೀಂಪುರ್ ಹಿಂಸಾಚಾರ: ಗುರುವಾರ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ
ಸುಪ್ರೀಂಕೋರ್ಟ್
Published On :

ನವದೆಹಲಿ: ಲಖೀಂಪುರ್ ಖೇರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಗುರುವಾರ ವಿಚಾರಣೆ ನಡೆಯಲಿದೆ. ಗುರುವಾರ ಬೆಳಗ್ಗೆ 11 ಗಂಟೆಗೆ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ. ಉತ್ತರ ಪ್ರದೇಶದ ಲಖೀಂಪುರ್ - ಖೇರ್ ಹಿಂಸಾಚಾರ ಘಟನೆ ಸಂಬಂಧ ಸುಪ್ರೀಂ ಕೋರ್ಟ್ ಬುಧವಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು. 

ಲಖೀಂಪುರ್ ಖೇರ್ ನಲ್ಲಿ ಭಾನುವಾರ ಸಂಭವಿಸಿದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದರು. ಕೇಂದ್ರ ಸಚಿವರ ಪುತ್ರನೊಬ್ಬ ಇದರಲ್ಲಿ ತೊಡಗಿಸಿಕೊಂಡಿರುವುದಾಗಿ ಆರೋಪಿಸಿ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ.

ಲಖೀಂಪುರ್- ಖೇರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐನಿಂದ ತನಿಖೆ ನಡೆಸಬೇಕೆಂದು ಕೋರಿ ಉತ್ತರ ಪ್ರದೇಶದ ವಕೀಲರೊಬ್ಬರು ಮುಖ್ಯ ನ್ಯಾಯಾಧೀಶರ ಬಳಿ ಮಂಗಳವಾರ ಕೋರಿದ್ದರು.  

ಭಾನುವಾರ ನಡೆದ ಘಟನೆಯಲ್ಲಿ ಭಾಗಿಯಾದ ಸಚಿವರಿಗೆ ಶಿಕ್ಷೆಯಾಗುವಂತೆ ಹಾಗೂ ಪ್ರಥಮ ಮಾಹಿತಿ ವರದಿ ದಾಖಲಿಸುವಂತೆ ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಅವರ ಬಳಿ ವಕೀಲರು ಮನವಿ ಮಾಡಿದ್ದರು.

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.