ದೇಶ

ಕೇರಳ: ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ 25 ಸಾವಿರ ಮಂದಿಗೆ ಅವಕಾಶ

ಕೋವಿಡ್ ಸಾಂಕ್ರಾಮಿಕದ ನಡುವೆ, ಮಂಡಲ-ಮಕರವಿಳಕ್ಕು ಉತ್ಸವದ ಸಮಯದಲ್ಲಿ ಶಬರಿಮಲೆಯ ವಿಶ್ವವಿಖ್ಯಾತ ಅಯ್ಯಪ್ಪ ದೇವಸ್ಥಾನದಲ್ಲಿ ಪ್ರತಿದಿನ ಕೇವಲ 25 ಸಾವಿರ ಭಕ್ತರು ದರ್ಶನ ಪಡೆಯಲು ಅನುಮತಿಸಲಾಗುವುದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಕೇರಳ: ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ 25 ಸಾವಿರ ಮಂದಿಗೆ ಅವಕಾಶ
ಶಬರಿಮಲೆ
Published On :

ತಿರುವನಂತಪುರಂ: ಕೋವಿಡ್ ಸಾಂಕ್ರಾಮಿಕದ ನಡುವೆ, ಮಂಡಲ-ಮಕರವಿಳಕ್ಕು ಉತ್ಸವದ ಸಮಯದಲ್ಲಿ ಶಬರಿಮಲೆಯ ವಿಶ್ವವಿಖ್ಯಾತ ಅಯ್ಯಪ್ಪ ದೇವಸ್ಥಾನದಲ್ಲಿ ಪ್ರತಿದಿನ ಕೇವಲ 25 ಸಾವಿರ ಭಕ್ತರು ದರ್ಶನ ಪಡೆಯಲು ಅನುಮತಿಸಲಾಗುವುದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಅಯ್ಯಪ್ಪ ದರ್ಶನಕ್ಕೆ 10 ವರ್ಷಕ್ಕಿಂತ ಕಡಿಮೆ ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟ ಭಕ್ತರಿಗೆ ಅವಕಾಶ ನೀಡುವ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಆನ್‌ಲೈನ್ 'ವರ್ಚುವಲ್ ಕ್ಯೂ' ವ್ಯವಸ್ಥೆಯ ಮೂಲಕ ಬುಕ್ ಮಾಡಿದ ಭಕ್ತರಿಗೆ ಪ್ರತಿದಿನ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಅವರು ಕೋವಿಡ್ 19 ಲಸಿಕೆ ಪಡೆದುಕೊಂಡಿರುವ ಅಥವಾ ಆರ್‌ಟಿ-ಪಿಸಿಆರ್ ಋಣಾತ್ಮಕ ವರದಿಯ ಎರಡು ಪ್ರಮಾಣಗಳ ಪ್ರಮಾಣಪತ್ರವನ್ನು ಒದಗಿಸಬೇಕು.

ಆದಾಗ್ಯೂ, ಭಕ್ತರು ಏರುಮಲೆ ಮತ್ತು ಪುಲ್ಮೇಡು ಸಾಂಪ್ರದಾಯಿಕ ಅರಣ್ಯ ಮಾರ್ಗಗಳ ಮೂಲಕ ಹೋಗಲು ಅನುಮತಿಸುವುದಿಲ್ಲ.

ಪಂಪಾ ನದಿಯಲ್ಲಿ ಸ್ನಾನ ಮಾಡಲು ಭಕ್ತರಿಗೆ ಅವಕಾಶವಿದೆ. ಕೋವಿಡ್ ನಿರ್ಬಂಧಗಳಿಂದಾಗಿ ಶಬರಿಮಲೆಯ ಸನ್ನಿಧಾನದಲ್ಲಿ ಯಾತ್ರಾರ್ಥಿಗಳಿಗೆ ಉಳಿಯಲು ಅವಕಾಶವಿಲ್ಲ ಎಂದು ಮಾಹಿತಿ ದೊರಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.