ಜಮ್ಮು-ಕಾಶ್ಮೀರದ ಜನತೆಯನ್ನು ಕಾಪಾಡುವಲ್ಲಿ ಕೇಂದ್ರ ವಿಫಲ: ಕಾಂಗ್ರೆಸ್ ನಾಯಕಿ ರಜನಿ ಪಾಟೀಲ್
ಜಮ್ಮು-ಕಾಶ್ಮೀರದ ಜನತೆಯನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕಿ ರಜನಿ ಪಾಟೀಲ್ ಆರೋಪಿಸಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರದ ಜನತೆಯನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕಿ ರಜನಿ ಪಾಟೀಲ್ ಆರೋಪಿಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ಹತ್ಯೆಗೀಡಾದ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ತಿಳಿಸಿದ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ರಾಜ್ಯಸಭೆ ಸದಸ್ಯರಾಗಿರುವ ರಜನಿ ಪಾಟೀಲ್, ಕೇಂದ್ರಾಡಳಿತ ಪ್ರದೇಶದಲ್ಲಿ ಹತ್ಯೆಯಾಗಿರುವುದು ಕೇಂದ್ರ ಸರ್ಕಾರದ ವೈಫಲ್ಯ, ಜಮ್ಮು-ಕಾಶ್ಮೀರದ ಭದ್ರತಾ ಪರಿಸ್ಥಿತಿ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ.
ಮೊಹಮ್ಮದ್ ಶಫಿರ್ ದರ್ ಅವರನ್ನು ಬಂಡಿಪೋರಾದಲ್ಲಿ ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದರೆ, ಎಂಎಲ್ ಬಿಂದ್ರೂ ಹಾಗೂ ಸುಪಿಂದರ್ ಕೌರ್ ಅವರನ್ನು ಮತ್ತೊಂದು ಘಟನೆಯಲ್ಲಿ ಉಗ್ರರು ಹತ್ಯೆ ಮಾಡಿದ್ದರು.
ಎರಡೂ ಕುಟುಂಬಗಳ ಮನೆಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದಾರೆ. ಮತ್ತೊಂದು ಘಟನೆಯಲ್ಲಿ ಉಗ್ರವಾದಿಗಳಿಂದ ಹತ್ಯೆಗೀಡಾಗಿದ್ದ ಶಿಕ್ಷಕರಾದ ದೀಪಕ್ ಚಂದ್ ಅವರ ನಿವಾಸಕ್ಕೂ ಕಾಂಗ್ರೆಸ್ ನಾಯಕರು ಭೇಟಿ ನೀಡಲಿದ್ದಾರೆ. "ಕೇಂದ್ರ ಸರ್ಕಾರ ಕಾಶ್ಮೀರದಲ್ಲಿ ಅಲ್ಪಸಂಖ್ಯಾತ ಸಮುದಾಯ ಹಾಗೂ ಇತರರಿಗೆ ಭದ್ರತೆಯ ವಾತಾವರನ ಮೂಡಲು ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮನವಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


