ದೇಶ

ಫೇಸ್ ಕ್ರೀಂನಲ್ಲಿ 24 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಯತ್ನ: ಏರ್ ಪೋರ್ಟ್ ನಲ್ಲಿ ಆರೋಪಿ ಬಂಧನ

ಆರೋಪಿ ಲಗೇಜು ಚೆಕ್ ಮಾಡಿದಾಗ ಅದರಲ್ಲಿ ಫೇಸ್ ಕ್ರೀಮುಗಳ ಬಾಕ್ಸುಗಳು ಪತ್ತೆಯಾಗಿದ್ದವು. ಅದರೊಳಗೆ ಚಿನ್ನ ಮತ್ತು ಬೆಳ್ಳಿಯನ್ನು ಪೇಸ್ಟ್ ರೂಪದಲ್ಲಿ ಸಾಗಿಸಲಾಗುತ್ತಿತ್ತು.

ಫೇಸ್ ಕ್ರೀಂನಲ್ಲಿ 24 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಯತ್ನ: ಏರ್ ಪೋರ್ಟ್ ನಲ್ಲಿ ಆರೋಪಿ ಬಂಧನ
ವಶಪಡಿಸಿಕೊಂಡ ಚಿನ್ನ
Published On :

ಹೈದರಾಬಾದ್: ಹೈದರಾಬಾದ್ ಆರ್ ಜಿ ಐ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಫೇಸ್ ಕ್ರೀಮ್ ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ದೋಹಾದಿಂದ ಭಾರತಕ್ಕೆ ಬಂದಿಳಿದಿದ್ದ. ಇದರೊಂದಿಗೆ ಇದೇ ವಿಮಾನನಿಲ್ದಾಣದಲ್ಲಿ ಈ ವಾರ ಚಿನ್ನ ಕಳ್ಳಸಾಗಣೆಗೆ ಯತ್ನಿಸಿದ ೫ನೇ ಪ್ರಕರಣ ಬೆಳಕಿಗೆ ಬಂದಂತಾಗಿದೆ.

ಖಚಿತ ಮಾಹಿತಿ ಆಧಾರದ ಮೇಲೆ ಕಸ್ಟಮ್ಸ್ ಅಧಿಕಾರಿಗಳು ಆರೋಪಿ ಚಲನವಲನಗಳ ಮೇಲೆ ನಿಗಾ ಇರಿಸಿ ತಪಾಸಣೆಗೊಳಪಡಿಸಿದ್ದಾರೆ. ಆತನ ಲಗೇಜು ಚೆಕ್ ಮಾಡಿದಾಗ ಅದರಲ್ಲಿ ಫೇಸ್ ಕ್ರೀಮುಗಳ ಬಾಕ್ಸುಗಳು ಪತ್ತೆಯಾಗಿದ್ದವು. ಅದರೊಳಗೆ ಚಿನ್ನ ಮತ್ತು ಬೆಳ್ಳಿಯನ್ನು ಪೇಸ್ಟ್ ರೂಪದಲ್ಲಿ ಸಾಗಿಸಲಾಗುತ್ತಿತ್ತು. 

525.25 ಗ್ರಾಂ ಚಿನ್ನ ಮತ್ತು 28 ಗ್ರಾಂ ಬೆಳ್ಳಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅದರ ಮೌಲ್ಯ 24 ಲಕ್ಷ ರೂ. ಕಳೆದ ಮಂಗಳವಾರ 1 ಕೆ.ಜಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿತ್ತು ಎನ್ನುವುದು ಗಮನಾರ್ಹ.

Related Article

ಚಿನ್ನಾಭರಣ ಸಮೇತ ಗಣೇಶ ವಿಸರ್ಜನೆ: ಮೂರು ದಿನಗಳ ಬಳಿಕ ಹುಡುಕಿ ತೆಗೆದ ಸ್ಕೂಬಾ ಡೈವರ್ಸ್!

ಕರ್ನಾಟಕದ ಕರಾವಳಿ ಭಾಗದ ಚಿನ್ನದ ಕಳ್ಳಸಾಗಾಣಿಕೆಗೆ ಭಟ್ಕಳದ ನಂಟು!

ವಿವಾಹ ಮುಗಿಸಿ ಮನೆಗೆ ತೆರಳುತ್ತಿದ್ದ ದಂಪತಿ ಮೇಲೆ ಹಲ್ಲೆ; ಸಾಮೂಹಿಕ ಅತ್ಯಾಚಾರ, ಚಿನ್ನಾಭರಣ ದರೋಡೆ, 8 ಮಂದಿ ಬಂಧನ

ಬ್ಯಾಂಕ್ ಲಾಕರ್ ನಿಂದ 6 ಕೆಜಿ ಚಿನ್ನ ಕಳವು: ಸಿಬ್ಬಂದಿಗಾಗಿ ಪೊಲೀಸರ ಹುಡುಕಾಟ

ಉತ್ತರ ಕನ್ನಡ ಜಿಲ್ಲೆಯ ಕುಗ್ರಾಮ ಶೀಗೆಹಳ್ಳಿಯ ವಿದ್ಯಾರ್ಥಿನಿ ಚೈತ್ರ ಹೆಗಡೆಗೆ 20 ಚಿನ್ನದ ಪದಕ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.