ಮಿಶ್ರಾ ಸಚಿವರಾಗಿರುವವರೆಗೆ ಲಖೀಂಪುರ್ ಹಿಂಸಾಚಾರದಲ್ಲಿ ನ್ಯಾಯ ದೊರೆಯುವ ವಿಶ್ವಾಸವಿಲ್ಲ: ಸಂಜಯ್ ಸಿಂಗ್
ಆರೋಪಿ ಆಶಿಶ್ ಮಿಶ್ರಾ ತಂದೆ ಅಜಯ್ ಮಿಶ್ರಾ ಕೇಂದ್ರದಲ್ಲಿ ಸಚಿವರಾಗಿರುವವರೆಗೆ ಲಖೀಂಪುರ್- ಖೇರಿ ಹಿಂಸಾಚಾರ ಕೇಸ್ ನಲ್ಲಿ ನ್ಯಾಯ ದೊರೆಯುವ ವಿಶ್ವಾಸವಿಲ್ಲ ಎಂದು ಭಾನುವಾರ ಹೇಳಿರುವ ಎಎಪಿ ಸಂಸದ ಸಂಜಯ್ ಸಿಂಗ್, ಅಜಯ್ ಕುಮಾರ್ ಮಿಶ್ರಾ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ನವದೆಹಲಿ: ಆರೋಪಿ ಆಶಿಶ್ ಮಿಶ್ರಾ ತಂದೆ ಅಜಯ್ ಮಿಶ್ರಾ ಕೇಂದ್ರದಲ್ಲಿ ಸಚಿವರಾಗಿರುವವರೆಗೆ ಲಖೀಂಪುರ್- ಖೇರಿ ಹಿಂಸಾಚಾರ ಕೇಸ್ ನಲ್ಲಿ ನ್ಯಾಯ ದೊರೆಯುವ ವಿಶ್ವಾಸವಿಲ್ಲ ಎಂದು ಭಾನುವಾರ ಹೇಳಿರುವ ಎಎಪಿ ಸಂಸದ ಸಂಜಯ್ ಸಿಂಗ್, ಅಜಯ್ ಕುಮಾರ್ ಮಿಶ್ರಾ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಅಜಯ್ ಮಿಶ್ರಾ ಪುತ್ರ ಆಶಿಶ್ ಅವರನ್ನು ರಕ್ಷಿಸಲು ಬಿಜೆಪಿ ಹಾಗೂ ಯೋಗಿ ಆದಿತ್ಯ ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ. ಆದರೆ, ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶದ ನಂತರ ಉತ್ತರ ಪ್ರದೇಶ ಸರ್ಕಾರಕ್ಕೆ ಬೇರೆ ಆಯ್ಕೆಗಳಿಲ್ಲದೆ ಆತನನ್ನು ಬಂಧಿಸಿದೆ ಎಂದು ಅವರು ಆರೋಪಿಸಿದರು.
ಅಜಯ್ ಮಿಶ್ರಾ ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿ ಇರುವವರೆಗೂ ಈ ಕೇಸ್ ನಲ್ಲಿ ನ್ಯಾಯ ದೊರೆಯುವ ವಿಶ್ವಾಸವಿಲ್ಲ ಎಂದು ಉತ್ತರ ಪ್ರದೇಶದಲ್ಲಿ ಪ್ರಚಾರದಲ್ಲಿ ನಿರತರಾಗಿರುವ ಸಂಜಯ್ ಸಿಂಗ್ ವಿಡಿಯೋ ಸಂದೇಶವೊಂದರಲ್ಲಿ ತಿಳಿಸಿದ್ದಾರೆ.
ಲಖೀಂಪುರ್ ಹಿಂಸಾಚಾರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿರುವ ಸಂಜಯ್ ಸಿಂಗ್, ಅಜಯ್ ಕುಮಾರ್ ಮಿಶ್ರಾ ಅವರನ್ನು ಏಕೆ ಇನ್ನೂ ಮಂತ್ರಿ ಸ್ಥಾನದಿಂದ ವಜಾಗೊಳಿಸಿಲ್ಲ ಎಂದು ಕೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


