ದೇಶ

ಜಮ್ಮು-ಕಾಶ್ಮೀರ: ಪೂಂಚ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ: ಕಿರಿಯ ನಿಯೋಜಿತ ಅಧಿಕಾರಿ ಸೇರಿ ಐವರು ಯೋಧ ಹುತಾತ್ಮ

ಕಿರಿಯ ನಿಯೋಜಿತ ಅಧಿಕಾರಿ(ಜೆಸಿಒ) ಸೇರಿದಂತೆ ಐವರು ಸೇನಾ ಯೋಧರು ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್ ಕೌಂಟರ್ ನಲ್ಲಿ ಹುತಾತ್ಮರಾಗಿದ್ದಾರೆ.

ಜಮ್ಮು-ಕಾಶ್ಮೀರ: ಪೂಂಚ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ: ಕಿರಿಯ ನಿಯೋಜಿತ ಅಧಿಕಾರಿ ಸೇರಿ ಐವರು ಯೋಧ ಹುತಾತ್ಮ
ಸಾಂದರ್ಭಿಕ ಚಿತ್ರ
Published On :

ಪೂಂಚ್(ಜಮ್ಮು-ಕಾಶ್ಮೀರ):  ಕಿರಿಯ ನಿಯೋಜಿತ ಅಧಿಕಾರಿ(ಜೆಸಿಒ) ಸೇರಿದಂತೆ ಐವರು ಸೇನಾ ಯೋಧರು ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್ ಕೌಂಟರ್ ನಲ್ಲಿ ಹುತಾತ್ಮರಾಗಿದ್ದಾರೆ.

ಇಂದು ನಸುಕಿನ ಜಾವದಿಂದ ತೀವ್ರ ಪ್ರಮಾಣದ ಗುಂಡಿನ ಚಕಮಕಿ ಉಗ್ರಗಾಮಿಗಳು ಮತ್ತು ಯೋಧರ ನಡುವೆ ಏರ್ಪಟ್ಟಿತು. ಇದರಲ್ಲಿ ಸೇನಾ ಯೋಧರು ಹುತಾತ್ಮರಾಗಿದ್ದಾರೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಪೂಂಚ್ ಜಿಲ್ಲೆಯ ಸುರಂಕೊಟೆಯ ಡಿಕೆಜಿ ಹತ್ತಿರ ಗ್ರಾಮವೊಂದರಲ್ಲಿ ಈ ಕಾರ್ಯಾಚರಣೆ ನಡೆಯಿತು. ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ಉಗ್ರರ ಇರುವಿಕೆ ಬಗ್ಗೆ ಮಾಹಿತಿ ಪಡೆದ ಯೋಧರು ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯ ಪ್ರಾರಂಭಿಸಿದರು. ಈ ವೇಳೆ ಎನ್ ಕೌಂಟರ್ ಏರ್ಪಟ್ಟಿತು ಎಂದು ರಕ್ಷಣಾ ಇಲಾಖೆ ವಕ್ತಾರರು ತಿಳಿಸಿದ್ದಾರೆ.

ಯೋಧರು ಶೋಧ ಕಾರ್ಯ ನಡೆಸುತ್ತಿದ್ದಾಗ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದರಿಂದ ತೀವ್ರ ಗಾಯಗೊಂಡ ಕಿರಿಯ ನಿಯೋಜಿತ ಅಧಿಕಾರಿ ಸೇರಿದಂತೆ ಇತರ ಐವರು ಹುತಾತ್ಮರಾಗಿದ್ದಾರೆ.

ಈ ವರದಿ ಬರುವವರೆಗೂ ಎನ್ ಕೌಂಟರ್ ಮುಂದುವರಿದಿತ್ತು ಎಂದು ವಕ್ತಾರರು ತಿಳಿಸಿದ್ದಾರೆ. ಪೂಂಚ್ ಜಿಲ್ಲೆಯ ಚಮ್ರರ್ ಅರಣ್ಯ ಪ್ರದೇಶದಲ್ಲಿ ಶಸ್ತ್ರಾಸ್ತ್ರ ಉಗ್ರಗಾಮಿಗಳ ಇರುವಿಕೆ ಬಗ್ಗೆ ವರದಿಗಳು ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಡಿ ನಿಯಂತ್ರಣ ರೇಖೆಯನ್ನು ದಾಟಿ ಈ ಉಗ್ರರು ಒಳನುಗ್ಗಿದ್ದರು. 

ಇದಕ್ಕೂ ಮುನ್ನ ಅನಂತ್ ನಾಗ್ ಮತ್ತು ಬಂಡಿಪೊರಾ ಜಿಲ್ಲೆಗಳಲ್ಲಿ ನಡೆದಿದ್ದ ಎನ್ ಕೌಂಟರ್ ಗಳಲ್ಲಿ ಇಬ್ಬರು ಉಗ್ರರ ಹತ್ಯೆಯಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.