ಲಖಿಂಪುರ್ ಹಿಂಸಾಚಾರ: ಕಾಂಗ್ರೆಸ್ ನಿಯೋಗದಿಂದ ಅಕ್ಟೋಬರ್ 13 ರಂದು ರಾಷ್ಟ್ರಪತಿ ಭೇಟಿ
ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರ ನಿಯೋಗವು ಬುಧವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ...

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರ ನಿಯೋಗವು ಬುಧವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ, ಘಟನೆಗೆ ಸಂಬಂಧಿಸಿದ ಸತ್ಯಾಂಶಗಳ ಜ್ಞಾಪನಾ ಪತ್ರವನ್ನು ಸಲ್ಲಿಸಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಹಿರಿಯ ನಾಯಕರಾದ ಎಕೆ ಆಂಟನಿ ಮತ್ತು ಗುಲಾಂ ನಬಿ ಆಜಾದ್, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಕೆಸಿ ವೇಣುಗೋಪಾಲ್ ಅವರನ್ನು ಒಳಗೊಂಡ ಏಳು ಸದಸ್ಯರ ನಿಯೋಗ ನಾಳೆ ಬೆಳಗ್ಗೆ 11.30 ಕ್ಕೆ ರಾಷ್ಟ್ರಪತಿಯನ್ನು ಭೇಟಿ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ ಮತ್ತು ಅಕ್ಟೋಬರ್ 3 ರಂದು ಲಖಿಂಪುರ್ ಖೇರಿಯಲ್ಲಿ ರೈತರನ್ನು ಹತ್ಯೆಗೈದ ಆರೋಪದ ಮೇಲೆ ಕೇಂದ್ರ ಸಚಿವರನ್ನು ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ರೈತರ ಹತ್ಯೆಯ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕರು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಿದ್ದಾರೆ.
ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆಶಿಶ್ ಅವರನ್ನು ಶನಿವಾರ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಲಖಿಂಪುರ ಖೇರಿ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


