ಯೂನಿಟೆಕ್ ಪ್ರಕರಣ: ತಿಹಾರ್ ಜೈಲಿನ 30 ಅಧಿಕಾರಿಗಳ ಅಮಾನತು
ಯುನಿಟೆಕ್ ಮಾಜಿ ಪ್ರವರ್ತಕರಿಗೆ ಸಹಾಯ ಮಾಡಿದ ಆರೋಪದಡಿ ತಿಹಾರ್ ಜೈಲಿನ 30 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಯುನಿಟೆಕ್ ಮಾಜಿ ಪ್ರವರ್ತಕರಿಗೆ ಸಹಾಯ ಮಾಡಿದ ಆರೋಪದಡಿ ತಿಹಾರ್ ಜೈಲಿನ 30 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಯುನಿಟೆಕ್ನ ಮಾಜಿ ಪ್ರೊಮೋಟರ್ಗಳಾದ ಸಂಜಯ್ ಚಂದ್ರ ಮತ್ತು ಅಜಯ್ ಚಂದ್ರ ಅವರಿಗೆ ಸಹಾಯ ಮಾಡಿದ ಆರೋಪದ ಮೇಲೆ ತಿಹಾರ್ ಜೈಲು ಆಡಳಿತ ಮಂಡಳಿಯೂ 28 ಅಧಿಕಾರಿಗಳನ್ನು ಅಮಾನತು ಮಾಡಿದ್ದು, ಇಬ್ಬರು ಗುತ್ತಿಗೆ ನೌಕರರನ್ನು ಕೂಡ ಸೇವೆಯಿಂದ ತೆಗೆದು ಹಾಕಿದೆ ಎಂದು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ತಿಹಾರ್ ಹಿರಿಯ ಜೈಲು ಅಧಿಕಾರಿಗಳು ಈ ಹಿಂದೆ ಸೂಪರಿಂಟೆಂಡೆಂಟ್, ಡೆಪ್ಯುಟಿ ಸೂಪರಿಂಟೆಂಡೆಂಟ್ ಮತ್ತು ಇತರೆ ಅಧಿಕಾರಿಗಳನ್ನು ಕೆಲಸದಿಂದ ಅಮಾನತುಗೊಳಿಸುವಂತೆ ಕೋರಿ ದೆಹಲಿ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಎಲ್ಲಾ ಅಧಿಕಾರಿಗಳು ಪೊಲೀಸ್ ವಿಚಾರಣೆ ವೇಳೆ ಪ್ರಮುಖರಾಗಿದ್ದರು ಎಂದು ಹೇಳಲಾಗಿದೆ.
ಚಾಟಿ ಬೀಸಿದ್ದ ಸುಪ್ರೀಂ ಕೋರ್ಟ್
ಇನ್ನು ಜೈಲು ಅಧಿಕಾರಿಗಳನ್ನು ಅಮಾನತು ಮಾಡಲು ಸುಪ್ರೀಂಕೋರ್ಟ್ ಆದೇಶಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ವಿಚಾರಣಾ ವರದಿಯನ್ನು ಪರಿಶೀಲಿಸಿದ ನಂತರ ಸುಪ್ರೀಂ ಕೋರ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂರ್ಣ ಪ್ರಮಾಣದ ಕ್ರಿಮಿನಲ್ ತನಿಖೆ ನಡೆಸಲು ಅನುಮತಿ ನೀಡಿತ್ತು. ಇದಾದ ನಂತರ ದೆಹಲಿ ಪೊಲೀಸ್ ಅಪರಾಧ ವಿಭಾಗವು ಮಂಗಳವಾರ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿತ್ತು.
ಅಲ್ಲದೆ ಈ ಪ್ರಕರಣದಲ್ಲಿ ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ದೆಹಲಿ ಪೊಲೀಸ್ ಆಯುಕ್ತರಿಗೆ ಸೂಚಿಸಿತ್ತು. ಸೆಪ್ಟಂಬರ್ 28 ರಂದು ಪೊಲೀಸರು ವಿಚಾರಣಾ ವರದಿಯನ್ನು ಸಲ್ಲಿಸಿದ್ದರು. ನಂತರ ಸುಪ್ರೀಂಕೋರ್ಟ್ ಅ. 6 ರಂದು ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಿ ಮತ್ತು ಅವರ ವಿರುದ್ಧ ಎಫ್ಐಆರ್ ದಾಖಲಿಸಿ ಎಂದು ಆದೇಶಿಸಿತ್ತು.
ತನಿಖೆಯ ಸಮಯದಲ್ಲಿ ತಿಹಾರ್ ಜೈಲ್ನ ನಂಬರ್ 7 ರ 32 ಅಧಿಕಾರಿಗಳು ಚಂದ್ರರಿಗೆ ಸಹಕರಿಸಿದ್ದಾರೆ. ಅವರು ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ..
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


