2024 ರ ಲೋಕಸಭಾ ಚುನಾವಣೆಗೂ ಮುನ್ನ ಗೋವಾದಲ್ಲಿ ಕಾಂಗ್ರೆಸ್ ಗೆಲುವು- ಪಿ.ಚಿದಂಬರಂ
ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ತದನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಜಯ ಭೇರಿ ಬಾರಿಸಲಿದೆ ಎಂದು ಹಿರಿಯ ಮುಖಂಡ ಪಿ. ಚಿದಂಬರಂ ಗುರುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಣಜಿ: ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ತದನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಜಯ ಭೇರಿ ಬಾರಿಸಲಿದೆ ಎಂದು ಹಿರಿಯ ಮುಖಂಡ ಪಿ. ಚಿದಂಬರಂ ಗುರುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಣಜಿಯಲ್ಲಿ ರಾಜ್ಯ ಚುನಾವಣಾ ಪ್ರಚಾರದ ಕಚೇರಿಯನ್ನು ಉದ್ಘಾಟಿಸಿದ ನಂತರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಗೋವಾ ಎಐಸಿಸಿ ಉಸ್ತುವಾರಿಯೂ ಆಗಿರುವ ಪಿ. ಚಿದಂಬರಂ, ಗೋವಾದಲ್ಲಿ ಯಾರು ಗೆಲುವು ಸಾಧಿಸುತ್ತರೋ ಅವರು ದೆಹಲಿಯಲ್ಲಿ ಅಧಿಕಾರ ಹಿಡಿಯಲಿದ್ದಾರೆ ಎಂಬುದನ್ನು ಇತಿಹಾಸದಿಂದ ಹೇಳುತ್ತೇನೆ. 2007ರಲ್ಲಿ ಗೋವಾದಲ್ಲಿ ಗೆದ್ದಿದ್ದ ಕಾಂಗ್ರೆಸ್ 2009ರಲ್ಲಿ ಕೇಂದ್ರದಲ್ಲಿಯೂ ಅಧಿಕಾರಕ್ಕೆ ಬಂದಿತ್ತು ಎಂದರು.
2012ರಲ್ಲಿ ಗೋವಾದಲ್ಲಿ ಸೋತಿತತ್ತು ದುರಾದೃಷ್ಟಕರ, 2014ರಲ್ಲಿ ದೆಹಲಿಯಲ್ಲೂ ಸೋಲಬೇಕಾಯಿತು. 2017ರಲ್ಲಿ ಗೋವಾದಲ್ಲಿ ಕಾರ್ಯಕರ್ತರು ಗೆದ್ದರು, ಆದರೆ, ನಮ್ಮ ಶಾಸಕರು ಗೋವಾವನ್ನು ಕಳೆದುಕೊಂಡರು. ಆದ್ದರಿಂದ 2019ರ ಲೋಕಸಭಾ ಚುನಾವಣೆಯಲ್ಲಿ ಸೋಲಬೇಕಾಯಿತು ಎಂದು ಅವರು ಹೇಳಿದರು.
ಈ ವರ್ಷ ಧೈರ್ಯ ಹಾಗೂ ಆತ್ಮವಿಶ್ವಾಸದೊಂದಿಗೆ ಪಕ್ಷ ಮುನ್ನಡೆಯಲಿದೆ. 2022ರಲ್ಲಿ ಗೋವಾ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


