ಲಖೀಂಪುರ ಖೇರಿ ಹಿಂಸಾಚಾರ: ಎಸ್ ಐಟಿಯಿಂದ ಘಟನೆಯ ಮರುಸೃಷ್ಟಿ; ಸ್ಥಳಕ್ಕೆ ಕೇಂದ್ರ ಸಚಿವರ ಪುತ್ರನನ್ನು ಕರೆದೊಯ್ದ ಅಧಿಕಾರಿಗಳು
ಲಿಖಿಂಪುರ ಖೇರಿ ಹಿಂಸಾಚಾರದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಎಐ) ಗುರುವಾರ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಮತ್ತು ಇನ್ನಿತರ ಮೂವರನ್ನು ಉತ್ತರ ಪ್ರದೇಶದ ತಿಕೋನಿಯಾ ಗ್ರಾಮಕ್ಕೆ ಕರೆದೊಯ್ದು ಘಟನೆಯನ್ನು ಮರುಸೃಷ್ಟಿಸಿದೆ.

ಲಖೀಂಪುರ ಖೇರಿ: ಲಿಖಿಂಪುರ ಖೇರಿ ಹಿಂಸಾಚಾರದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಎಐ) ಗುರುವಾರ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಮತ್ತು ಇನ್ನಿತರ ಮೂವರನ್ನು ಉತ್ತರ ಪ್ರದೇಶದ ತಿಕೋನಿಯಾ ಗ್ರಾಮಕ್ಕೆ ಕರೆದೊಯ್ದು ಘಟನೆಯನ್ನು ಮರುಸೃಷ್ಟಿಸಿದೆ.
ಬಿಗಿ ಭದ್ರತೆಯ ನಡುವೆ ಮೂವರು ಆರೋಪಿಗಳನ್ನು ಲಂಖಿಪುರ ಜಿಲ್ಲಾ ಕೇಂದ್ರದಿಂದ ಸುಮಾರು 60 ಕಿ.ಮೀ. ದೂರದಲ್ಲಿರುವ ತಿಕೊನಿಯಾ-ಬನ್ಬೀರ್‌ಪುರ ರಸ್ತೆಯಲ್ಲಿರುವ ಘಟನಾ ಸ್ಥಳಕ್ಕೆ ಕರೆದೊಯ್ಯಲಾಯಿತು. ಬಳಿಕ ಘಟನೆಯನ್ನು ಮರುಸೃಷ್ಟಿಸಲಾಗಿದೆ.
ಇದಕ್ಕಾಗಿ ಘಟನಾ ಸ್ಥಳಕ್ಕೆ ಆರೋಪಿಗಳನ್ನು ಕರೆದೊಯ್ದಿದ್ದ ತಂಡ, ಎಲ್ಲಿ ಏನು ನಡೆಯಿತು ಎಂದು ಆರೋಪಿಗಳಿಂದಲೇ ಮಾಹಿತಿ ಪಡೆಯುವ ಕಾರ್ಯಕ್ಕೆ ಮುಂದಾಗಿದೆ. ನಾಲ್ವರು ಪ್ರಮುಖ ಆರೋಪಿಗಳ ಪೈಕಿ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರನೂ ಸೇರಿದ್ದಾನೆ.
ಅಕ್ಟೋಬರ್ 3ರಂದು ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಹತ್ಯೆಯಾಗಿದ್ದರು. ಬಿಜೆಪಿ ಕಾರ್ಯಕರ್ತರು ಸಾಗುತ್ತಿದ್ದ ವಾಹನ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಇದರಲ್ಲಿ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ಇದ್ದರು ಎನ್ನಲಾಗಿದೆ. ಆಕ್ರೋಶಗೊಂಡ ರೈತರು ವಾಹನದಲ್ಲಿದ್ದ ಕೆಲವರನ್ನು ಹೊಡೆದರು ಎಂದು ಆರೋಪಿಸಲಾಗಿದೆ. ಮೃತರಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಚಾಲಕ ಸೇರಿದ್ದಾರೆ. ಘಟನೆಯಲ್ಲಿ ಓರ್ವ ಪತ್ರಕರ್ತ ಕೂಡ ಮೃತಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


