ಕೇಂದ್ರಾಡಳಿತ ಪ್ರದೇಶ, ರಾಜ್ಯಗಳಿಗೆ 101 ಕೋಟಿಗೂ ಅಧಿಕ ಡೋಸ್ ಕೋವಿಡ್-19 ಲಸಿಕೆ ಪೂರೈಕೆ: ಕೇಂದ್ರ ಸರ್ಕಾರ
ಇಲ್ಲಿಯವರೆಗೂ ಕೇಂದ್ರಾಡಳಿತ ಪ್ರದೇಶ ಮತ್ತು ರಾಜ್ಯಗಳಿಗೆ ಸುಮಾರು 101 ಕೋಟಿಗೂ ಅಧಿಕ ಡೋಸ್ ಕೋವಿಡ್-19 ಲಸಿಕೆಯನ್ನು ಪೂರೈಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ನವದೆಹಲಿ: ಇಲ್ಲಿಯವರೆಗೂ ಕೇಂದ್ರಾಡಳಿತ ಪ್ರದೇಶ ಮತ್ತು ರಾಜ್ಯಗಳಿಗೆ ಸುಮಾರು 101 ಕೋಟಿಗೂ ಅಧಿಕ ಡೋಸ್ ಕೋವಿಡ್-19 ಲಸಿಕೆಯನ್ನು ಪೂರೈಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
ಸುಮಾರು 11.12 ಕೋಟಿ ಡೋಸ್ ಸಮತೋಲಿತ ಮತ್ತು ಬಳಕೆಯಾಗದ ಲಸಿಕೆ ಈಗಲೂ ಕೇಂದ್ರಾಡಳಿತ ಪ್ರದೇಶ ಹಾಗೂ ರಾಜ್ಯಗಳಲ್ಲಿ ಲಭ್ಯವಿರುವುದಾಗಿ ಮಾಹಿತಿ ನೀಡಿದೆ.
ಸರ್ಕಾರದ ಉಚಿತ ದರದ ಮಾರ್ಗ ಹಾಗೂ ನೇರವಾಗಿ ರಾಜ್ಯ ಖರೀದಿ ಕೆಟಗರಿ ಮೂಲಕ ಈವರೆಗೂ ಕೇಂದ್ರಾಡಳಿತ ಪ್ರದೇಶ ಮತ್ತು ರಾಜ್ಯಗಳಿಗೆ 101 ಕೋಟಿ ( 1,01,51,66,665) ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಲಸಿಕಾ ಅಭಿಯಾನದ ಅಡಿಯಲ್ಲಿ ದೇಶದಲ್ಲಿ ತಯಾರಿಸಲಾಗುವ ಲಸಿಕೆಗಳನ್ನು ಕೇಂದ್ರ ಸರ್ಕಾರ ಖರೀದಿಸಿ, ಕೇಂದ್ರಾಡಳಿತ ಪ್ರದೇಶ ಹಾಗೂ ರಾಜ್ಯಗಳಲ್ಲಿ ಶೇಕಡಾ 75 ರಷ್ಟು ಡೋಸ್ ನ್ನು ಪೂರೈಕೆ ಮಾಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


