ದುಷ್ಕರ್ಮಿಗಳಿಂದ ತಮಿಳುನಾಡು ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇ-ಮೇಲ್ ಸೃಷ್ಟಿ, ಕೇಸ್ ದಾಖಲು
ದುಷ್ಕರ್ಮಿಗಳು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರ ಹೆಸರಿನಲ್ಲಿ ನಕಲಿ ಇ-ಮೇಲ್ ಖಾತೆಗಳನ್ನು ಸೃಷ್ಟಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೋಲಿಸರಿಗೆ ದೂರು ನೀಡಲಾಗಿದೆ ಎಂದು ಭಾನುವಾರ ತಮಿಳುನಾಡು...

ಚೆನ್ನೈ: ದುಷ್ಕರ್ಮಿಗಳು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರ ಹೆಸರಿನಲ್ಲಿ ನಕಲಿ ಇ-ಮೇಲ್ ಖಾತೆಗಳನ್ನು ಸೃಷ್ಟಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೋಲಿಸರಿಗೆ ದೂರು ನೀಡಲಾಗಿದೆ ಎಂದು ಭಾನುವಾರ ತಮಿಳುನಾಡು ರಾಜಭವನ ತಿಳಿಸಿದೆ.
"ಇತ್ತೀಚೆಗೆ ಕೆಲವು ದುಷ್ಕರ್ಮಿಗಳು ಗೌರವಾನ್ವಿತ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇಮೇಲ್ ಖಾತೆಗಳನ್ನು ಸೃಷ್ಟಿಸಿ ಆಕ್ಷೇಪಾರ್ಹ ವಿಷಯಗಳೊಂದಿಗೆ ಇ-ಮೇಲ್‌ಗಳನ್ನು ಕಳುಹಿಸುತ್ತಿದ್ದಾರೆ" ಎಂದು ರಾಜಭವನದ ಅಧಿಕೃತ ಪ್ರಕಟಣೆ ಹೇಳಿದೆ.
ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
"ರಾಜಭವನದ ಅಧಿಕೃತ ಇ-ಮೇಲ್ govtam@nic.in ಮತ್ತು ಅಧಿಕೃತ ಟ್ವಿಟರ್ ಖಾತೆ @rajbhavan_tn"ಆಗಿದ್ದು, ರಾಜಭವನದ ಅಧಿಕೃತ ಇ-ಮೇಲ್ ಅಥವಾ ಟ್ವಿಟರ್ ಖಾತೆಗಳನ್ನು ಹೊರತುಪಡಿಸಿ ಯಾವುದೇ ಖಾತೆಗಳನ್ನು ನಂಬಬೇಡಿ ಎಂದು ತಮಿಳುನಾಡು ರಾಜ್ಯಪಾಲರ ಕಚೇರಿ ಜನರಲ್ಲಿ ಮನವಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


