ದೇಶ

ಪಂಜಾಬಿನ 13 ಸಮಸ್ಯೆಗಳ ಪಟ್ಟಿಯೊಂದಿಗೆ ಸೋನಿಯಾಗೆ ಪತ್ರ ಬರೆದ ಸಿಧು

2022ರ ವಿಧಾನಸಭಾ ಚುನಾವಣೆ ಪ್ರಣಾಳಿಕೆ ಸೇರಿದಂತೆ 13 ಅಂಶಗಳ ಅಜೆಂಡಾದೊಂದಿಗೆ ತಮ್ಮ ನೇತೃತ್ವದಲ್ಲಿ ಸಭೆ ನಡೆಯಬೇಕೆಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ.

ಪಂಜಾಬಿನ 13 ಸಮಸ್ಯೆಗಳ ಪಟ್ಟಿಯೊಂದಿಗೆ ಸೋನಿಯಾಗೆ ಪತ್ರ ಬರೆದ ಸಿಧು
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸಿಧು, ಸೋನಿಯಾ ಗಾಂಧಿ
Published On :

ಚಂಡೀಘಡ: 2022ರ ವಿಧಾನಸಭಾ ಚುನಾವಣೆ ಪ್ರಣಾಳಿಕೆ ಸೇರಿದಂತೆ 13 ಅಂಶಗಳ ಅಜೆಂಡಾದೊಂದಿಗೆ ತಮ್ಮ ನೇತೃತ್ವದಲ್ಲಿ ಸಭೆ ನಡೆಯಬೇಕೆಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ.

ಅಕ್ಟೋಬರ್ 15 ರಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬರೆದಿರುವ ಸಿಧು, ಕಾಂಗ್ರೆಸ್ ಪಕ್ಷದ  ಪುನಶ್ಚೇತನ ಮತ್ತು 
ವಿಮೋಚನೆಗೆ  ಕೊನೆಯ ಅವಕಾಶವಾಗಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

2017ರ ವಿಧಾನಸಭಾ ಚುನಾವಣೆ ಪ್ರಚಾರ ಸಂದರ್ಭದಲ್ಲಿ ನೀಡಿದ್ದ 18 ಅಂಶಗಳ ಅಜೆಂಡಾಕ್ಕೆ ಆದ್ಯತೆ ನೀಡಬೇಕು ಮತ್ತು ಚುನಾವಣಾ ಭರವಸೆಗಳನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. 

2015ರಲ್ಲಿ  ಕೊಟ್ಕಾಪುರದಲ್ಲಿ ನಡೆದ ಪೊಲೀಸರ ಗುಂಡಿನ ದಾಳಿ ಮತ್ತು ಪರೀಧ್ ಕೋಟ್ ನಲ್ಲಿನ ಗುರು ಗ್ರಂಥ  ಸಾಹೀತ್ ಅಪವಿತ್ರದ ಬಗ್ಗೆ ಪಂಜಾಬ್ ಜನತೆ ನ್ಯಾಯ ಕೇಳುತ್ತಿದ್ದಾರೆ ಎಂದು ಸಿಧು ಹೇಳಿದ್ದಾರೆ. 

ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿರುವ ಮೂರು ಕೃಷಿ ಕಾನೂನುಗಳನ್ನು ಪಂಜಾಬ್ ಸರ್ಕಾರ ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು,  ವಿದ್ಯುತ್ ಖರೀದಿ ಒಪ್ಪಂದ ಕುರಿತ ಶ್ವೇತ ಪತ್ರವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಸಿಧು ಪತ್ರದಲ್ಲಿ ತಿಳಿಸಿದ್ದು, ಪಂಜಾಬ್ ಜನರ ಹಿತದೃಷ್ಟಿಯಿಂದ ಸರ್ಕಾರ ಕೂಡಲೇ ಕಾರ್ಯಪ್ರವೃತ್ತರಾಗಲು ನಿರ್ದೇಶನ ನೀಡುವಂತೆ ಸೋನಿಯಾ ಅವರಲ್ಲಿ ಸಿಧು ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.