ದೇಶ

30 ವರ್ಷಗಳಲ್ಲಿ ಇದೇ ಮೊದಲು: ಶ್ರೀನಗರದಲ್ಲಿ ಸಿಆರ್ ಪಿಎಫ್ ನಿಂದ ಮಹಿಳೆಯರ ತಪಾಸಣೆ

ಜಮ್ಮು-ಕಾಶ್ಮೀರದಲ್ಲಿ 30 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಿಆರ್ ಪಿಎಫ್ ನ ಮಹಿಳಾ ಪೇದೆಗಳು ಮಹಿಳೆಯರನ್ನು ತಪಾಸಣೆಗೊಳಪಡಿಸಿದ್ದಾರೆ.

30 ವರ್ಷಗಳಲ್ಲಿ ಇದೇ ಮೊದಲು: ಶ್ರೀನಗರದಲ್ಲಿ ಸಿಆರ್ ಪಿಎಫ್ ನಿಂದ ಮಹಿಳೆಯರ ತಪಾಸಣೆ
ಜಮ್ಮು-ಕಾಶ್ಮೀರದಲ್ಲಿ ಮಹಿಳೆಯರ ತಪಾಸಣೆ
Published On :

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ 30 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಿಆರ್ ಪಿಎಫ್ ನ ಮಹಿಳಾ ಪೇದೆಗಳು ಮಹಿಳೆಯರನ್ನು ತಪಾಸಣೆಗೊಳಪಡಿಸಿದ್ದಾರೆ. 

ಲಾಲ್ ಚೌಕ್ ಪ್ರದೇಶದಲ್ಲಿ ಮಹಿಳಾ ಸಿಬ್ಬಂದಿಗಳು ಇದೇ ಮೊದಲ ಬಾರಿಗೆ ಮಹಿಳೆಯರನ್ನು ತಪಾಸಣೆಗೊಳಪಡಿಸಿದ್ದಾರೆ.  ಕಾಶ್ಮೀರದಲ್ಲಿ ಜನಸಾಮಾನ್ಯರ ಹತ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಆರ್ ಪಿಎಫ್ ಈ ಕ್ರಮಕ್ಕೆ ಮುಂದಾಗಿದ್ದು, ಮಹಿಳೆಯರ ಬ್ಯಾಗ್ ಗಳನ್ನು ತಪಾಸಣೆಗೊಳಪಡಿಸಿದ್ದಾರೆ.

ಇದಕ್ಕೆ ಕೆಲವು ಮಹಿಳೆಯರು ಆಕ್ಷೇಪ ವ್ಯಕ್ತಪಡಿಸಿದ್ದು, ಸಾರ್ವಜನಿಕರ ಕಣ್ಣಿಗೆ ಬೀಳದಂತೆ ತಪಾಸಣೆಯನ್ನು ನಡೆಸಬಹುದಿತ್ತು ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದಾರೆ. ಮಹಿಳೆಯರು ಖಾಸಗಿಯಾಗಿರಿಸಿಕೊಳ್ಳುವ ಹಲವು ವಸ್ತುಗಳನ್ನು ತಮ್ಮೊಂದಿಗೆ ಕೊಂಡೊಯ್ಯುತ್ತಿರುತ್ತಾರೆ. ಸಿಆರ್ ಪಿಎಫ್ ಮಹಿಳಾ ಸಿಬ್ಬಂದಿಗಳು ಕನಿಷ್ಟ ಮರೆಯಲ್ಲಿ ತಪಾಸಣೆ ಮಾಡುವ ವ್ಯವಸ್ಥೆಯನ್ನೂ ಮಾಡಿಕೊಂಡಿಲ್ಲ ಎಂದು ಫರೀದಾ ಎಂಬ ಮಹಿಳೆ ಹೇಳಿದ್ದಾರೆ. "ತಪಾಸಣೆ ಮಾಡುವುದಕ್ಕೆ ನಮ್ಮ ಅಡ್ಡಿ ಇಲ್ಲ. ಆದರೆ ಮಾಡುವ ರೀತಿಯ ಬಗ್ಗೆ ಆಕ್ಷೇಪವಿದೆ" ಎನ್ನುತ್ತಾರೆ ಫರೀದಾ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.