ದೇಶ

ಉತ್ತರಪ್ರದೇಶ: ನ್ಯಾಯಾಲಯದಲ್ಲಿ ವಕೀಲರ ಗುಂಡಿಟ್ಟು ಹತ್ಯೆ

ಉತ್ತರಪ್ರದೇಶದ ಶಹಜಹಾನ್ ಪುರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದೊಳಗೆ ವಕೀಲರೊಬ್ಬರಿಗೆ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಸೋಮವಾರ ವರದಿಯಾಗಿದೆ.

ಉತ್ತರಪ್ರದೇಶ: ನ್ಯಾಯಾಲಯದಲ್ಲಿ ವಕೀಲರ ಗುಂಡಿಟ್ಟು ಹತ್ಯೆ
ಸಂಗ್ರಹ ಚಿತ್ರ
Published On :

ಲಖನೌ: ಉತ್ತರಪ್ರದೇಶದ ಶಹಜಹಾನ್ ಪುರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದೊಳಗೆ ವಕೀಲರೊಬ್ಬರಿಗೆ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಸೋಮವಾರ ವರದಿಯಾಗಿದೆ. 

ಹತ್ಯೆಯಾದ ವಕೀಲರನ್ನು ಭೂಪೇಂದ್ರ ಪ್ರತಾಪ್ ಸಿಂಹ ಎಂದು ಗುರ್ತಿಸಲಾಗಿದೆ. ನ್ಯಾಯಾಲಯದ ಮೂರನೇ ಮಹಡಿಯಲ್ಲಿ ವಕೀಲರ ಶವ ಪತ್ತೆಯಾಗಿದೆ. ಮೃತದೇಹದ ಬಳಿ ದೇಶೀಯ ನಿರ್ಮಿತ ಪಿಸ್ತೂಲ್ ಕೂಡ ಕಂಡುಬಂದಿದೆ ಎಂದು ವರದಿಯಾಗಿದೆ.

ಹತ್ಯೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಘಟನೆ ಬಳಿಕ ಸ್ಥಳಕ್ಕಾಗಮಿಸಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ಆರಂಭಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.