ಉತ್ತರ ಪ್ರದೇಶ: ಕೋರ್ಟ್ನಲ್ಲೇ ದುಷ್ಕರ್ಮಿಗಳಿಂದ ವಕೀಲನ ಗುಂಡಿಕ್ಕಿ ಹತ್ಯೆ
ಭೂಪೇಂದ್ರ ಪ್ರತಾಪ್ ಸಿಂಗ್ ಎಂಬ ವಕೀಲರನ್ನು ನ್ಯಾಯಾಲಯದ ಮೂರನೇ ಮಹಡಿಯಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಶಹಜಾನ್ಪುರದಲ್ಲಿ ನಡೆದಿದೆ.

ಶಹಜಾನ್ಪುರ: ಭೂಪೇಂದ್ರ ಪ್ರತಾಪ್ ಸಿಂಗ್ ಎಂಬ ವಕೀಲರನ್ನು ನ್ಯಾಯಾಲಯದ ಮೂರನೇ ಮಹಡಿಯಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಶಹಜಾನ್ಪುರದಲ್ಲಿ ನಡೆದಿದೆ.
ಶಹಜಾನ್ಪುರ ಸಿವಿಲ್ ಕೋರ್ಟ್ನ ಮೂರನೇ ಮಹಡಿಯಲ್ಲಿ ಈ ದುರ್ಘಟನೆ ನಡೆದಿದೆ. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಸದರ್ ಪೊಲೀಸರು ಬಂದೂಕನ್ನು ವಶಪಡಿಸಿಕೊಂಡಿದ್ದಾರೆ. ಇನ್ನೂ ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡವನ್ನು ರಚನೆ ಮಾಡಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಜಲಾಲಾಬಾದ್ ತಹಸಿಲ್‌ನ ವಕೀಲ ಭೂಪೇಂದ್ರ ಸಿಂಗ್(38) ಅವರು ಜಿಲ್ಲಾ ನ್ಯಾಯಾಲಯದ ಎಸಿಜೆಎಂ -1ರ ಮೂರನೇ ಮಹಡಿಯ ಕಚೇರಿಯಲ್ಲಿ ಗುಮಾಸ್ತರನ್ನು ಭೇಟಿ ಮಾಡಲು ಬಂದಾಗ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ) ಎಸ್ ಆನಂದ್ ಅವರು ಹೇಳಿದ್ದಾರೆ.
ಹತ್ಯೆಯಾದ ಸ್ಥಳದಲ್ಲಿ ಬೇರೆ ಯಾರೂ ಇರಲಿಲ್ಲವಾದ್ದರಿಂದ, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ತಕ್ಷಣಕ್ಕೆ ತಿಳಿದು ಬಂದಿಲ್ಲ. ಹಿರಿಯ ಅಧಿಕಾರಿಗಳು ಮತ್ತು ತನಿಖಾ ತಂಡಗಳು ಸ್ಥಳದಲ್ಲಿದ್ದು, ಪರಿಶೀಲನೆ ನಡೆಸುತ್ತಿವೆ ಎಂದು ಆನಂದ್ ಅವರು ತಿಳಿಸಿದ್ದಾರೆ.
ಕೊಲೆಯ ಹಿಂದಿನ ಉದ್ದೇಶವೇನು ಎಂಬುದರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಹಳೇ ವೈಷಮ್ಯದಿಂದಾಗಿ ಕೃತ್ಯವೆಸಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


