ಲಖೀಂಪುರ್ ಖೇರಿ ಹಿಂಸಾಚಾರ: ನಾಳೆ ಸುಪ್ರೀಂನಲ್ಲಿ ವಿಚಾರಣೆ
ಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖೀಂಪರ್ ಖೇರಿಯಲ್ಲಿ ಸಂಭವಿಸಿದ್ದ ಹಿಂಸಾಚಾರ ಕುರಿತ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಳೆ ಕೈಗೆತ್ತಿಕೊಳ್ಳಲಿದೆ. ರೈತರ ಪ್ರತಿಭಟನೆ ಹಿಂಸಾಚಾರಗಿ ತಿರುಗಿ ನಾಲ್ವರು ರೈತರು ಸೇರಿದಂತೆ 8 ಮಂದಿ ಹತ್ಯೆಯಾಗಿದ್ದರು.

ನವದೆಹಲಿ: ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖೀಂಪರ್ ಖೇರಿಯಲ್ಲಿ ಸಂಭವಿಸಿದ್ದ ಹಿಂಸಾಚಾರ ಕುರಿತ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಳೆ ಕೈಗೆತ್ತಿಕೊಳ್ಳಲಿದೆ. ರೈತರ ಪ್ರತಿಭಟನೆ ಹಿಂಸಾಚಾರಗಿ ತಿರುಗಿ ನಾಲ್ವರು ರೈತರು ಸೇರಿದಂತೆ 8 ಮಂದಿ ಹತ್ಯೆಯಾಗಿದ್ದರು.
ಎಂಟು ಮಂದಿಯ ಬರ್ಬರ ಹತ್ಯೆ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಅಕ್ಟೋಬರ್ 8 ರಂದು ಅತೃಪ್ತಿ ವ್ಯಕ್ತಪಡಿಸಿದ್ದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರಿದ್ದ ನ್ಯಾಯಪೀಠ, ನಾಳೆಗೆ ಮುಂದಿನ ವಿಚಾರಣೆಯನ್ನು ಮುಂದೂಡಿತ್ತು.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ ಈವರೆಗೆ ಹತ್ತು ಮಂದಿಯನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಘಟನೆ ಬಗ್ಗೆ ಸಿಬಿಐ ಸೇರಿದಂತೆ ಉನ್ನತ ಮಟ್ಟದ ನ್ಯಾಯಾಂಗ ತನಿಖೆ ಆಗಬೇಕು ಎಂದು ಇಬ್ಬರು ವಕೀಲರು ಸಿಜೆಐಗೆ ಪತ್ರ ಬರೆದ ನಂತರ ಉನ್ನತ ನ್ಯಾಯಾಲಯ ಈ ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದೆ.
ಅಕ್ಟೋಬರ್ 3 ರಂದು ಕೇಂದ್ರ ಸರ್ಕಾರದ ಮೂರು ಹೊಸ ಕೃಷಿ ಕಾನೂನುಗಳ ವಿರೋಧಿಸಿ ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಭೇಟಿ ವಿರುದ್ಧ ಲಖೀಂಪುರ್ ಖೇರಿಯಲ್ಲಿ ರೈತರ ಗುಂಪೊಂದು ಪ್ರತಿಭಟನೆ ನಡೆಸುತ್ತಿದ್ದಾಗ ಕಾರನ್ನು ಹರಿಸಿ, ನಾಲ್ವರು ರೈತರನ್ನು ಹತ್ಯೆಗೈಯಲಾಗಿತ್ತು. ಆಕ್ರೋಶಗೊಂಡ ರೈತರು ಇಬ್ಬರು ಬಿಜೆಪಿ ಕಾರ್ಯಕರ್ತರು ಹಾಗೂ ಒಬ್ಬ ಡ್ರೈವರ್ ಗೆ ಹಿಗ್ಗಾಮುಗ್ಗಾ ಥಳಿಸಿ ಹತ್ಯೆ ಮಾಡಿದ್ದರು. ಘಟನೆಯಲ್ಲಿ ಓರ್ವ ಪತ್ರಕರ್ತ ಕೂಡಾ ಅಸುನೀಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


