ಉತ್ತರಾಖಂಡ ಪ್ರವಾಹ: ನೀರಿನಲ್ಲಿ ಕೊಚ್ಚಿಕೊಂಡು ಹೋದ ಸೇತುವೆ, ಯಾತ್ರೆ ಸ್ಥಗಿತ
ಪ್ರವಾಹ ಬಾಧಿತ ಉತ್ತರಾಖಂಡದಲ್ಲಿ ನೀರಿನ ಮಟ್ಟದಲ್ಲಿ ಏರಿಕೆಯಾಗಿ ಚಂಪಾವತ್ ನಲ್ಲಿನ ಚಲ್ತಿ ನದಿ ಮೇಲಿನ ನಿರ್ಮಾಣ ಹಂತದ ಸೇತುವೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.

ಡೆಹ್ರಾಡೂನ್: ಕಳೆದೆರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಉತ್ತರಾಖಂಡ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.
ನೀರಿನ ಮಟ್ಟದಲ್ಲಿ ಏರಿಕೆಯಾಗಿ ಚಂಪಾವತ್ ನಲ್ಲಿನ ಚಲ್ತಿ ನದಿ ಮೇಲಿನ ನಿರ್ಮಾಣ ಹಂತದ ಸೇತುವೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ನೈನಿತಾಲ್ ನ ಮನೆಗಳು ಹಾಗೂ ಕಟ್ಟಡಗಳು ನೀರು ನುಗ್ಗಿದ್ದು, ಜನರು ತೀವ್ರ ತೊಂದರೆ ಎದುರಿಸುವಂತಾಗಿದೆ. ಕೋಶಿ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗಿ ರಾಮನಗರ್- ರಾಣಿಕೇಟ್ ಮಾರ್ಗದಲ್ಲಿನ ಲೆಮೆನ್ ಟ್ರೀ ರೆಸಾರ್ಟ್ ನಲ್ಲಿ ಸಿಲುಕಿಕೊಂಡಿದ್ದ ಸುಮಾರು 100 ಮಂದಿಯನ್ನು ರಕ್ಷಿಸಲಾಗಿದೆ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.
ಕಳೆದ 48 ಗಂಟೆಗಳಿಂದ ನಿರಂತರವಾಗಿ ಬೀಳುತ್ತಿರುವ ಧಾರಾಕಾರ ಮಳೆಯಿಂದಾಗಿ ಏಳು ಕಡೆಗಳಲ್ಲಿ ಅವಶೇಷಗಳು ಬಿದ್ದಿರುವ ಕಾರಣ ಚಮೋಲಿ ಜಿಲ್ಲೆಯ ಬದ್ರಿನಾಥ್ ರಾಷ್ಟ್ರಿಯ ಹೆದ್ದಾರಿ ಸಂಪೂರ್ಣವಾಗಿ ಕಡಿತಗೊಂಡಿರುವುದಾಗಿ ಜಿಲ್ಲಾಡಳಿತ ಮಂಗಳವಾರ ತಿಳಿಸಿದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಉತ್ತರಾಖಂಡ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ಎದುರಾಗುವ ಪರಿಸ್ಥಿತಿಯನ್ನು ನಿಭಾಯಿಸಲು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮಾತನಾಡಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಬದ್ರಿನಾಥ ಚಾರ್ ಧಾಮ್ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಬದ್ರಿನಾಥ ದೇವಾಲಯಕ್ಕೆ ಆಗಮಿಸುತ್ತಿದ್ದ ಭಕ್ತರನ್ನು ಸುರಕ್ಷಿತ ಪ್ರದೇಶಗಳಲ್ಲಿ ತಡೆಯಿಡಿಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


