ಹೈಕೋರ್ಟ್ ನ್ಯಾಯಾಧೀಶರು ಹಾಗೂ ನ್ಯಾಯಾಂಗ ವಿರುದ್ಧ ಅವಹೇಳಕಾರಿ ಹೇಳಿಕೆ: ಸಿಬಿಐನಿಂದ ಮತ್ತೂ 5 ಆರೋಪಿಗಳ ಬಂಧನ
16 ಆರೋಪಿಗಳಲ್ಲಿ ಐವರು ವಿದೇಶದಲ್ಲಿದ್ದು ಅವರನ್ನು ಸ್ವದೇಶಕ್ಕೆ ಕರೆತರುವ ಪ್ರಯತ್ನಗಳು ನಡೆದಿದೆ. ಈ ಹಿಂದೆ ನ್ಯಾಯಾಂಗ ವಿರುದ್ಧದ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಿಂದ ಸಿಬಿಐ ಡಿಲೀಟ್ ಮಾಡಿಸಿತ್ತು.

ವಿಜಯವಾಡ: ನ್ಯಾಯಾಂಗ ಮತ್ತು ನ್ಯಾಯಾಧೀಶರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಗಳನ್ನು ಹಂಚಿಕೊಂಡ ಕಾರಣಕ್ಕೆ ಸಿಬಿಐ 6 ಮಂದಿಯನ್ನು ಬಂಧಿಸಿದೆ. ಈ ಹಿಂದೆ ಸಿಬಿಐ ನ್ಯಾಯಾಂಗ ವಿರುದ್ಧ ಕೆಟ್ಟದಾಗಿ ಪೋಸ್ಟ್ ಮಾಡಿದ್ದ 5 ಮಂದಿಯನ್ನು ಬಂಧಿಸಿತ್ತು. ಇದರೊಂದಿಗೆ ಬಂಧನಕ್ಕೊಳಗಾದವರ ಸಂಖ್ಯೆ 11ಕ್ಕೆ ಏರಿಕೆಯಾದಂತಾಗಿದೆ.
ಇದನ್ನೂ ಓದಿ: ಮುದ್ರಣ- ವಿದ್ಯುನ್ಮಾನ ಮಾಧ್ಯಮಗಳಲ್ಲಿ ಅಶ್ಲೀಲ ಮಾಹಿತಿ ಪ್ರಸಾರಕ್ಕೆ ನಿರ್ಬಂಧ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಆಂಧ್ರಪ್ರದೇಶ ಹೈಕೋರ್ಟ್ ನ್ಯಾಯಾಧೀಶರು ನೀಡಿದ್ದ ಸೂಚನೆಯಂತೆ 2020ರಲ್ಲಿ 16 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಹೈಕೋರ್ಟ್ ಸೂಚನೆಯಂತೆ ಈ ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿತ್ತು.
ಆರೋಪಿಗಳಲ್ಲಿ ಐವರು ವಿದೇಶದಲ್ಲಿದ್ದು ಅವರನ್ನು ಸ್ವದೇಶಕ್ಕೆ ಕರೆತರುವ ಪ್ರಯತ್ನಗಳು ನಡೆದಿದೆ. ಈ ಹಿಂದೆ ನ್ಯಾಯಾಂಗ ವಿರುದ್ಧದ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಿಂದ ಸಿಬಿಐ ಡಿಲೀಟ್ ಮಾಡಿಸಿತ್ತು.
Related Article
ಧನ್ಬಾಗ್ ನ್ಯಾಯಧೀಶರ ಹಿಟ್-ರನ್ ಪ್ರಕರಣ: ಸಿಬಿಐಗೆ ಜಾರ್ಖಂಡ್ ಹೈಕೋರ್ಟ್ ತರಾಟೆ
ಅತ್ಯಾಚಾರ ಸಂತ್ರಸ್ತೆಯ ಚಾರಿತ್ರ್ಯ ಸರಿಯಿಲ್ಲ ಎಂದು ಆರೋಪಿಯನ್ನು ಬಿಡಲಾಗದು: ಕೇರಳ ಹೈಕೋರ್ಟ್
ಮುಸ್ಲಿಂ ಮದುವೆ ಕೇವಲ ಒಪ್ಪಂದ ಅಷ್ಟೆ, ಹಿಂದೂ ವಿವಾಹದಂತೆ ಸಂಸ್ಕಾರವಲ್ಲ: ಕರ್ನಾಟಕ ಹೈಕೋರ್ಟ್
ಲೈಂಗಿಕ ಕಿರುಕುಳ ಪ್ರಕರಣ: ಕೈಲಾಶ್ ವಿಜಯವರ್ಗಿಯಾ ಮತ್ತು ಇತರ ಇಬ್ಬರಿಗೆ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು
ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸೇರಿ 7 ನ್ಯಾಯಾಧೀಶರ ವರ್ಗಾವಣೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


