ದೇಶ

ಹರಿಯಾಣದಲ್ಲಿ ಭೀಕರ ರಸ್ತೆ ಅಪಘಾತ: ಪುಟ್ಟ ಮಗು ಸೇರಿ ಒಂದೇ ಕುಟುಂಬದ 8 ಮಂದಿ ಸಾವು

ಹರಿಯಾಣದ ಜಜ್ಜರ್ ಜಿಲ್ಲೆಯ ಬಹದ್ದೂರ್​ಗಢ್​​ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪುಟ್ಟ ಮಗು ಸೇರಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.

ಹರಿಯಾಣದಲ್ಲಿ ಭೀಕರ ರಸ್ತೆ ಅಪಘಾತ: ಪುಟ್ಟ ಮಗು ಸೇರಿ ಒಂದೇ ಕುಟುಂಬದ 8 ಮಂದಿ ಸಾವು
ಘಟನಾ ಸ್ಥಳದಲ್ಲಿ ಆ್ಯಂಬುಲೆನ್ಸ್
Published On :

ಜಜ್ಜರ್​​: ಹರಿಯಾಣದ ಜಜ್ಜರ್ ಜಿಲ್ಲೆಯ ಬಹದ್ದೂರ್​ಗಢ್​​ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪುಟ್ಟ ಮಗು ಸೇರಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.

ಕೆಎಂಪಿ ಎಕ್ಸ್‌ಪ್ರೆಸ್‌ವೇ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಉತ್ತರ ಪ್ರದೇಶದ ಕಡೆ ಪ್ರಯಾಣ ಬೆಳೆಸುತ್ತಿದ್ದ ಕಾರೊಂದರಲ್ಲಿ ಒಟ್ಟು 11 ಮಂದಿ ಇದ್ದು, 8 ಮಂದಿ ಬಲಿಯಾಗಿದ್ದಾರೆ.

ಸ್ಥಳಕ್ಕೆ ಬಹದ್ದೂರ್​ಗಢ್ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮತ್ತೊಂದು ಮಗು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರ ಗುರುತು ಪತ್ತೆ ಹಚ್ಚಲಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.