ಜಮ್ಮು ಕಾಶ್ಮೀರ: ಮೊದಲು ಗಡಿ ನಿರ್ಣಯ, ನಂತರ ರಾಜ್ಯ ಸ್ಥಾನಮಾನ: ಅಮಿತ್ ಶಾ
370ನೇ ವಿಧಿ ತೆಗೆದುಹಾಕಿದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ಅಮಿತ್ ಶಾ ಮೂರು ದಿನಗಳ ಕಾಲ ಅಲ್ಲಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಶ್ರೀನಗರ: ಶನಿವಾರ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ ಕಾಶ್ಮೀರ ರಾಜ್ಯ ಸ್ಥಾನಮಾನವನ್ನು ಗಡಿ ನಿರ್ಣಯ(ಡಿಲಿಮಿಟೇಷನ್) ಹಾಗೂ ವಿಧಾನಸಭಾ ಚುನಾವಣೆ ಬಳಿಕ ಪುನರ್ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಆರ್ಟಿಕಲ್ 370 ರದ್ಧತಿ ಬಳಿಕ ಕಾಶ್ಮೀರಕ್ಕೆ ಅಮಿತ್ ಶಾ ಮೊದಲ ಭೇಟಿ; ಹುತಾತ್ಮ ಪೊಲೀಸ್ ಅಧಿಕಾರಿ ಕುಟುಂಬಸ್ಥರಿಗೆ ಸಾಂತ್ವನ
370ನೇ ವಿಧಿ ತೆಗೆದುಹಾಕಿದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ಅಮಿತ್ ಶಾ ಮೂರು ದಿನಗಳ ಕಾಲ ಅಲ್ಲಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಶನಿವಾರ ಅವರು ಶ್ರೀನಗರದ ಯುವ ಸಂಘಸಂಸ್ಥೆಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಗಡಿ ನಿರ್ಣಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಗಡಿ ನಿರ್ಣಯ ಆಗಿಯೇ ತೀರುತ್ತದೆ. ಆದರೆ ಚುನಾವಣೆ ಬಳಿಕ. ಆಗಲೇ ಕಾಶ್ಮೀರದ ರಾಜ್ಯ ಸ್ಥಾನಮಾನವನ್ನೂ ಪುನರ್ ಸ್ಥಾಪಿಸಲಾಗುವುದು. ಇದರಿಂದಾಗಿ ರಾಜ್ಯದ ಯುವ ಪೀಳಿಗೆಗೆ ಉದ್ಯೋಗಾವಕಾಶಗಳು ಹೆಚ್ಚಲಿದೆ. ಎಂದು ಶಾ ಅಭಿಪ್ರಾಯಪಟ್ಟಿದ್ದಾರೆ.
ತಮ್ಮ ಭಾಷಣದ ನಡುವೆ ಅಮಿತ್ ಶಾ ಜಮ್ಮು ಕಾಶ್ಮೀರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಯಾರಿಂದಲೂ ತಡೆಗಟ್ಟಲು ಸಾಧ್ಯವಿಲ್ಲ.ರಾಜ್ಯದಲ್ಲಿ ಶಾಂತಿ ಕದಡಲು ಯಾರಾದರೂ ಯತ್ನಿಸಿದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸುವ ಭರವಸೆ ನೀಡಿದರು.
Related Article
'ಮೋದಿ ಸರ್ವಾಧಿಕಾರಿಯಲ್ಲ' ಎಂಬ ಅಮಿತ್ ಶಾ ಹೇಳಿಕೆ ಒಂದು ಜೋಕ್: ಟೆನಿಸ್ ದಂತಕಥೆ ಮಾರ್ಟಿನಾ
ಇತಿಹಾಸ ಬರೆದ ಭಾರತ: ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ ಹಲವು ಗಣ್ಯರ ಗುಣಗಾನ
ಪಂಜಾಬ್ ಬಿಕ್ಕಟ್ಟು: ಮಾಜಿ ಸಿಎಂ ಅಮರಿಂದರ್ ಸಿಂಗ್ ಜೊತೆ ಅಮಿತ್ ಶಾ ಚರ್ಚೆ; ಶಿವಸೇನೆ ಕಿಡಿ
ಶೀಘ್ರದಲ್ಲೇ ಹೊಸ ಸಹಕಾರಿ ನೀತಿ ಘೋಷಣೆ: ಕೇಂದ್ರ ಗೃಹ ಸಚಿವ ಅಮಿತ್ ಶಾ
ಅಮಿತ್ ಶಾ ಹೇಳಿಕೆ ತಂದ ಸಂಚಲನ! (ನೇರ ನೋಟ)
ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ಅಮಿತ್ ಶಾ ಘೋಷಣೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


