ಕೋವಿಡ್-19 ನಿಂದ ಭಾರತದಲ್ಲಿ ಜನರ ಜೀವಿತಾವಧಿ ಇಳಿಕೆ- ವರದಿ
ವಿಶ್ವದಾದ್ಯಂತ ಜನರ ಜೀವನದ ಮೇಲೆ ಪರಿಣಾಮ ಬೀರಿದ ಕೋವಿಡ್ -19 ಸಾಂಕ್ರಾಮಿಕವು, ಇದೀಗ ಸುಮಾರು ಎರಡು ವರ್ಷಗಳ ಕಾಲ ಭಾರತದಲ್ಲಿ ಜೀವಿತಾವಧಿಯಲ್ಲಿ ಇಳಿಕೆಗೆ ಕಾರಣವಾಗಿದೆ ಎಂದು ಮುಂಬೈ ಮೂಲಕ ಅಂತಾರಾಷ್ಟ್ರೀಯ ಜನಸಂಖ್ಯಾ ಅಧ್ಯಯನ ಸಂಸ್ಥೆಯ (ಐಐಪಿಎಸ್) ವಿಜ್ಞಾನಿಗಳ ಅಂಕಿಅಂಶಗಳ ವಿಶ್ಲೇಷಣೆ ಬಹಿರಂಗಪಡಿಸಿದೆ.

ಮುಂಬೈ: ವಿಶ್ವದಾದ್ಯಂತ ಜನರ ಜೀವನದ ಮೇಲೆ ಪರಿಣಾಮ ಬೀರಿದ ಕೋವಿಡ್ -19 ಸಾಂಕ್ರಾಮಿಕವು, ಇದೀಗ ಸುಮಾರು ಎರಡು ವರ್ಷಗಳ ಕಾಲ ಭಾರತದಲ್ಲಿ ಜೀವಿತಾವಧಿಯಲ್ಲಿ ಇಳಿಕೆಗೆ ಕಾರಣವಾಗಿದೆ ಎಂದು ಮುಂಬೈ ಮೂಲಕ ಅಂತಾರಾಷ್ಟ್ರೀಯ ಜನಸಂಖ್ಯಾ ಅಧ್ಯಯನ ಸಂಸ್ಥೆಯ (ಐಐಪಿಎಸ್) ವಿಜ್ಞಾನಿಗಳ ಅಂಕಿಅಂಶಗಳ ವಿಶ್ಲೇಷಣೆ ಬಹಿರಂಗಪಡಿಸಿದೆ.
ಸಾಂಕ್ರಾಮಿಕ ರೋಗದಿಂದಾಗಿ ಪುರುಷರು ಮತ್ತು ಮಹಿಳೆಯರಲ್ಲಿ ಜನನದ ಸಮಯದಲ್ಲಿ ಜೀವಿತಾವಧಿಯಲ್ಲಿನ ಕುಸಿತವನ್ನು ಸೂಚಿಸುವ ವಿಶ್ಲೇಷಣಾತ್ಮಕ ವರದಿಯು ಇತ್ತೀಚೆಗೆ 'ಬಿಎಂಸಿ ಪಬ್ಲಿಕ್ ಹೆಲ್ತ್' ಜರ್ನಲ್ ನಲ್ಲಿ ಪ್ರಕಟವಾಗಿದೆ. ಐಐಪಿಎಸ್ ಪ್ರೊಫೆಸರ್ ಸೂರ್ಯಕಾಂತ್ ಯಾದವ್ ಈ ವರದಿಯನ್ನು ಬರೆದಿದ್ದಾರೆ.
2019 ರಲ್ಲಿ ಪುರುಷರ ಜೀವಿತಾವಧಿ 69.5 ವರ್ಷ ಇದ್ದು, ಇದೀಗ 67.5 ವರ್ಷಕ್ಕೆ ಕುಸಿದಿದೆ. ಮಹಿಳೆಯರ ಜೀವಿತಾವಧಿ 2020ರಲ್ಲಿ 72 ರಿಂದ 67.5 ವರ್ಷ ಮತ್ತು 69.8 ವರ್ಷಗಳಿಗೆ ಇಳಿದಿದೆ ಎಂದು ವರದಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


