ದೇಶ

ಲಖಿಂಪುರ್ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ವಜಾಗೊಳಿಸುವಂತೆ ಒತ್ತಾಯಿಸಿ ನಾಳೆ ರೈತರ ಪ್ರತಿಭಟನೆ

ರೈತರು ಸೇರಿದಂತೆ ಎಂಟು ಮಂದಿಯನ್ನು ಬಲಿ ಪಡೆದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ರೈತರು ಮಂಗಳವಾರ ದೇಶಾದ್ಯಂತ ಪ್ರತಿಭಟನೆ....

ಲಖಿಂಪುರ್ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ವಜಾಗೊಳಿಸುವಂತೆ ಒತ್ತಾಯಿಸಿ ನಾಳೆ ರೈತರ ಪ್ರತಿಭಟನೆ
ಅಜಯ್ ಮಿಶ್ರಾ
Published On :

ನೋಯ್ಡಾ: ರೈತರು ಸೇರಿದಂತೆ ಎಂಟು ಮಂದಿಯನ್ನು ಬಲಿ ಪಡೆದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ರೈತರು ಮಂಗಳವಾರ ದೇಶಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ.

ಎಸ್‌ಕೆಎಂ ಹಾಗೂ ಹಲವು ರೈತ ಸಂಘಗಳು ಕೇಂದ್ರ ಸರ್ಕಾರವು ತಮ್ಮ ಕಾನೂನುಬದ್ಧ ಬೇಡಿಕೆಗಳನ್ನು ಈಡೇರಿಸುವಂತೆ ನಿರಂತರವಾಗಿ ಒತ್ತಾಯ ಮಾಡಿಕೊಂಡೇ ಬರುತ್ತಿವೆ. ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧದ ರೈತರ ಪ್ರತಿಭಟನೆ 12ನೇ ತಿಂಗಳಿಗೆ ಕಾಲಿಡುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್ ಕೆಎಂ ಕೇಂದ್ರ ಸಚಿವರ ವಿರುದ್ಧ ಮತ್ತು ಕೃಷಿ ಕಾನೂನುಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ.

ದೇಶದ ಪ್ರತಿಯೊಂದು ಜಿಲ್ಲೆಯ ಆಡಳಿತ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂಬ ಬೇಡಿಕೆಯೊಂದಿಗೆ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಲಾಗುವುದು ಎಂದು ಬಿಕೆಯು ಮಾಧ್ಯಮ ಉಸ್ತುವಾರಿ ಧರ್ಮೇಂದ್ರ ಮಲಿಕ್ ಪಿಟಿಐಗೆ ತಿಳಿಸಿದ್ದಾರೆ.

ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಗೆ ದೇಶದ ಎಲ್ಲಾ ರೈತ ಸಂಘಟನೆಗಳು ಬೆಂಬಲಿಸಿವೆ. ಪ್ರತಿಭಟನೆಯ ಮೂಲಕ, ಈ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ನಾವು ಮತ್ತೊಮ್ಮೆ ಮನವಿ ಮಾಡುತ್ತೇವೆ ಎಂದು ಮಲಿಕ್ ಹೇಳಿದ್ದಾರೆ.

ಕೇಂದ್ರ ಸರ್ಕಾರ ತಮ್ಮ "ಕಾನೂನುಬದ್ಧ ಬೇಡಿಕೆಗಳಾದ" ಮೂರು ರೈತ ವಿರೋಧಿ ಕಾನೂನುಗಳನ್ನು ರದ್ದುಗೊಳಿಸಬೇಕು, ಎಲ್ಲಾ ಉತ್ಪನ್ನಗಳಿಗೆ ಮತ್ತು ಎಲ್ಲಾ ರೈತರಿಗೆ ಎಂಎಸ್‌ಪಿಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಬೇಕು ಹಾಗೂ ಕೇಂದ್ರ ಅಜಯ್ ಮಿಶ್ರಾ ಅವರನ್ನು ವಜಾಗಳಿಸಿ, ಬಂಧಿಸಬೇಕು ಎಂದು ಒತ್ತಾಯಿಸಿ ಎಸ್ ಕೆಎಂ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.