ಕೋವಿಡ್-19: ಭಾರತದಲ್ಲಿ 12,428 ಹೊಸ ಕೇಸು ಪತ್ತೆ, 356 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿದ್ದು, ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 12 ಸಾವಿರದ 428 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 356 ಮಂದಿ ಮೃತಪಟ್ಟಿದ್ದಾರೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿದ್ದು, ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 12 ಸಾವಿರದ 428 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 356 ಮಂದಿ ಮೃತಪಟ್ಟಿದ್ದಾರೆ.
ಕಳೆದ 24 ಗಂಟೆಗಳಲ್ಲಿ 15 ಸಾವಿರದ 951 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.ದೇಶದಲ್ಲಿ 12 ಸಾವಿರದ 428 ಹೊಸ ಕೇಸುಗಳು ಮತ್ತು 356 ಸಾವಿನ ಪೈಕಿ 6 ಸಾವಿರದ 664 ಕೇಸುಗಳು ಕೇರಳ ರಾಜ್ಯವೊಂದರಲ್ಲಿಯೇ ಪತ್ತೆಯಾಗಿದ್ದು 53 ಮಂದಿ ನಿನ್ನೆ ಮೃತಪಟ್ಟಿದ್ದಾರೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷದ 63 ಸಾವಿರದ 816 ಕ್ಕೆ ತಲುಪಿದೆ. ಗುಣಮುಖ ಹೊಂದುತ್ತಿರುವ ದರ ಪ್ರಸ್ತುತ ಶೇಕಡಾ 98.19ರಷ್ಟಿದ್ದು, ಕಳೆದ ಮಾರ್ಚ್ 2020ರಿಂದ ಅಧಿಕವಾಗಿದೆ. ಕಳೆದ 24 ಗಂಟೆಗಳಲ್ಲಿ 15 ಸಾವಿರದ 951 ಮಂದಿ ಗುಣಮುಖರಾಗಿದ್ದು ಒಟ್ಟು ಗುಣಮುಖ ಹೊಂದಿದವರ ಸಂಖ್ಯೆ 3 ಕೋಟಿಯ 35 ಲಕ್ಷದ 83 ಸಾವಿರದ 318 ಆಗಿದೆ.
ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇಕಡಾ 1ಕ್ಕಿಂತ ಕಡಿಮೆಯಾಗಿದ್ದು, ಪ್ರಸ್ತುತ ಶೇಕಡಾ 0.48ರಷ್ಟಿದೆ. ಕಳೆದ ಮಾರ್ಚ್ ನಿಂದ ಅತ್ಯಂತ ಕಡಿಮೆಯಾಗಿದೆ.
ಇನ್ನು ಭಾರತದಲ್ಲಿ ಒಂದೇ 11 ಲಕ್ಷದ 31 ಸಾವಿರದ 826 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದುವರೆಗೆ 60 ಕೋಟಿಯ 19 ಲಕ್ಷದ 01 ಸಾವಿರದ 543 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಇನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇದುವರೆಗೆ 102.94 ಕೋಟಿ ಲಸಿಕೆ ಡೋಸ್ ಗಳನ್ನು ನೀಡಲಾಗಿದೆ. ಇನ್ನೂ 12.37 ಕೋಟಿ ಬಾಕಿ ಉಳಿಕೆ ಮತ್ತು ಡೋಸ್ ಗಳು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


