ಲಖಿಂಪುರ್ ಹಿಂಸಾಚಾರ ಪ್ರಕರಣ: ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ ಎಸ್‌ಐಟಿ
ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮಂಗಳವಾರ ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದೆ ಎಂದು ಉತ್ತರ ಪ್ರದೇಶ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಖಿಂಪುರ್ ಖೇರಿ: ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮಂಗಳವಾರ ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದೆ ಎಂದು ಉತ್ತರ ಪ್ರದೇಶ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ಟೋಬರ್ 3 ರಂದು ನಡೆದ ಹಿಂಸಾಚಾರದಲ್ಲಿ ಎಂಟು ಜನರು ಸಾವನ್ನಪ್ಪಿದ್ದರು ಮತ್ತು ಅವರಲ್ಲಿ ನಾಲ್ವರು ರೈತರಾಗಿದ್ದು, ಬಿಜೆಪಿ ಕಾರ್ಯಕರ್ತರನ್ನು ಸಾಗಿಸುತ್ತಿದ್ದ ವಾಹನ ರೈತರ ಮೇಲೆ ಹರಿದಿದೆ ಎಂದು ಆರೋಪಿಸಲಾಗಿದೆ.
ಇದರಿಂದ ಆಕ್ರೋಶಗೊಂಡ ರೈತರು ವಾಹನಗಳಲ್ಲಿದ್ದ ಕೆಲವರನ್ನು ಥಳಿಸಿದ್ದರು. ಘಟನೆಯಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು, ಓರ್ವ ಚಾಲಕ ಮತ್ತು ಪತ್ರಕರ್ತ ಸೇರಿದಂತೆ ನಾಲ್ವರು ಮೃತಪಟ್ಟಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಗುರ್ವಿಂದರ್ ಸಿಂಗ್ ಮತ್ತು ವಿಚಿತ್ರ ಸಿಂಗ್ ಅವರನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ) ಬಂಧಿಸಿದೆ. ಅಕ್ಟೋಬರ್ 4 ರಂದು ಸುಮಿತ್ ಜೈಸ್ವಾಲ್ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು ಎಂದು ಲಖೀಂಪುರ್ ಪೊಲೀಸ್ ಕ್ರೈಂ ಬ್ರಾಂಚ್ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ವಾರ್ಡ್ ಸದಸ್ಯ ಜೈಸ್ವಾಲ್, ಕೃಷಿ ಕಾನೂನು ವಿರುದ್ಧದ ಪ್ರತಿಭಟನಾಕಾರರಲ್ಲಿ "ಕೆಲ ದುಷ್ಕರ್ಮಿಗಳು" ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಎಫ್‌ಐಆರ್‌ನಲ್ಲಿ ರೈತರ ಮೇಲೆ ವಾಹನ ಹರಿಸಿದ ಬಗ್ಗೆ ಯಾವುದೇ ಉಲ್ಲೇಖವಿಲ್ಲ.
ಬಹ್ರೈಚ್ ಮೂಲದ ಜಗಜಿತ್ ಸಿಂಗ್ ನೀಡಿದ ದೂರಿನ ಮೇರೆಗೆ ದಾಖಲಿಸಲಾದ ಮತ್ತೊಂದು ಎಫ್‌ಐಆರ್‌ನಲ್ಲಿ ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ, ಜೊತೆಗೆ 15 ರಿಂದ 20 ಅಪರಿಚಿತ ವ್ಯಕ್ತಿಗಳನ್ನು ಆರೋಪಿಗಳೆಂದು ಹೆಸರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


