ಲಿವ್-ಇನ್ ಸಂಬಂಧಗಳು ಜೀವನದ ಭಾಗವಾಗಿದ್ದು, ಇದು ಅವರ ವೈಯಕ್ತಿಕ ವಿಷಯ: ಅಲಹಾಬಾದ್ ಹೈಕೋರ್ಟ್
ವಿವಾಹ ಪೂರ್ವ ಜೀವನವು ಅವರ ವೈಯಕ್ತಿಕ ವಿಷಯವಾಗಿದೆ. ಇದನ್ನು ಸಾಮಾಜಿಕ ದೃಷ್ಟಿಯಿಂದ ನೋಡಬಾರದು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ಅಲಹಾಬಾದ್: ವಿವಾಹ ಪೂರ್ವ ಜೀವನವು ಅವರ ವೈಯಕ್ತಿಕ ವಿಷಯವಾಗಿದೆ. ಇದನ್ನು ಸಾಮಾಜಿಕ ದೃಷ್ಟಿಯಿಂದ ನೋಡಬಾರದು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.
ನ್ಯಾಯಾಧೀಶರಾದ ಪ್ರಿಟಿಂಕೆರ್ ದಿವಾಕರ್ ಮತ್ತು ಅಶುತೋಷ್ ಶ್ರೀವಾಸ್ತವ ಅವರ ಪೀಠವು ಈ ತೀರ್ಪನ್ನು ನೀಡಿದೆ. ಲಿವ್ ಇನ್ ಸಂಬಂಧದಲ್ಲಿದ್ದ ಇಬ್ಬರು ದಂಪತಿ ತಮ್ಮ ದೈನಂದಿನ ಜೀವನದಲ್ಲಿ ಹುಡುಗಿ ಮನೆಯವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೋರ್ಟ್ಗೆ ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಪೀಠ ಈ ತೀರ್ಪು ನೀಡಿದೆ.
ಇತ್ತೀಚೆಗೆ ಲಿವ್-ಇನ್ ಸಂಬಂಧಗಳು ಜೀವನದ ಭಾಗವಾಗಿಬಿಟ್ಟಿವೆ. ಅಲ್ಲದೇ ಭಾರತದ ಸಂವಿಧಾನದ 21ನೇ ವಿಧಿಯಡಿಯಲ್ಲಿ ಎಲ್ಲಾರಿಗೂ ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕನ್ನು ನೀಡಲಾಗಿದೆ. ಹಾಗಾಗಿ ಇದನ್ನು ಸಾಮಾಜಿಕ ದೃಷ್ಟಿಯಿಂದ ನೋಡಬಾರದು ಎಂದು ಹೈಕೋರ್ಟ್ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


