ನ. 5ರಂದು ಕೇದಾರನಾಥಕ್ಕೆ ಮೋದಿ ಭೇಟಿ: ಶಂಕರಾಚಾರ್ಯರ ಸಮಾಧಿ ಉದ್ಘಾಟನೆ
ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 5 ರಂದು ಉತ್ತರಾಖಂಡದ ಕೇದಾರನಾಥಕ್ಕೆ ಭೇಟಿ ನೀಡಲಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 5 ರಂದು ಉತ್ತರಾಖಂಡದ ಕೇದಾರನಾಥಕ್ಕೆ ಭೇಟಿ ನೀಡಲಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಕೇದಾರನಾಥ ದೇವಾಲಯದಲ್ಲಿ ಪ್ರಧಾನಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ನಂತರ ಶ್ರೀ ಆದಿ ಶಂಕರಾಚಾರ್ಯ ಸಮಾಧಿ ಉದ್ಘಾಟನೆ ಮತ್ತು ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. 2013 ರ ಪ್ರವಾಹದಲ್ಲಿ ನಾಶವಾದ ನಂತರ ಸಮಾಧಿಯನ್ನು ಪುನರ್ನಿರ್ಮಿಸಲಾಯಿತು.
ವಿಧಾನಸಭೆ ಚುನಾವಣೆ ನಡೆಯಲಿರುವ ಉತ್ತರಾಖಂಡ ರಾಜ್ಯದಲ್ಲಿ ರ್‍ಯಾಲಿಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. 130 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದ ಪೂರ್ಣಗೊಂಡಿರುವ ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.
ಸಂಗಮ ಘಾಟ್, ಪ್ರಥಮ ಚಿಕಿತ್ಸಾ ಮತ್ತು ಪ್ರವಾಸಿ ಸೌಲಭ್ಯ ಕೇಂದ್ರ, ಆಡಳಿತ ಕಚೇರಿ ಮತ್ತು ಆಸ್ಪತ್ರೆ, ಎರಡು ಅತಿಥಿ ಗೃಹಗಳು, ಪೊಲೀಸ್ ಠಾಣೆ, ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್, ಮಂದಾಕಿನಿ ಆಸ್ಥಾಪತ್ ಸೇರಿದಂತೆ 180 ಕೋಟಿ ರೂ.ಗಳ ಬಹುವಿಧದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪ್ರಧಾನಿ ಸಚಿವಾಲಯ ತಿಳಿಸಿದೆ.
ಸಮಾಧಿಯ ಮರುನಿರ್ಮಾಣವನ್ನು ಉಲ್ಲೇಖಿಸಿರುವ ಪಿಎಂಒ, ಮೋದಿ ಅವರ ಮಾರ್ಗದರ್ಶನದಲ್ಲಿ ಸಂಪೂರ್ಣ ಕೆಲಸವನ್ನು ಕೈಗೊಳ್ಳಲಾಗಿದ್ದು, ಅವರು ನಿರಂತರವಾಗಿ ಅದರ ಪ್ರಗತಿಯನ್ನು ಪರಿಶೀಲಿಸಿದ್ದಾರೆ ಮತ್ತು ಮೇಲ್ವಿಚಾರಣೆ ಮಾಡಿದ್ದಾರೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


