ದೇಶ

ಉತ್ತರಾಖಂಡದ ಡೆಹ್ರಾಡೂನ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: 11 ಮಂದಿ ಸಾವು, ನಾಲ್ವರಿಗೆ ಗಾಯ 

ರಾಜ್ಯದ ಡೆಹ್ರಾಡೂನ್ ಜಿಲ್ಲೆಯ ಚಕ್ರತಾ ತಹಸಿಲ್ ಎಂಬಲ್ಲಿ ಭಾನುವಾರ ಬೆಳಗಿನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ.

ಉತ್ತರಾಖಂಡದ ಡೆಹ್ರಾಡೂನ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: 11 ಮಂದಿ ಸಾವು, ನಾಲ್ವರಿಗೆ ಗಾಯ 
ಸಾಂದರ್ಭಿಕ ಚಿತ್ರ
Published On :

ಉತ್ತರಾಖಂಡ: ರಾಜ್ಯದ ಡೆಹ್ರಾಡೂನ್ ಜಿಲ್ಲೆಯ ಚಕ್ರತಾ ತಹಸಿಲ್ ಎಂಬಲ್ಲಿ ಭಾನುವಾರ ಬೆಳಗಿನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ. 

ಸ್ಥಳಕ್ಕೆ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧಿಕಾರಿಗಳ ಜೊತೆ ಧಾವಿಸಿದ್ದು ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.ಹೆಚ್ಚಿನ ಮಾಹಿತಿ ಸಿಗಬೇಕಿದೆ. 

ವಾಹನ ಕಂದಕಕ್ಕೆ ಉರುಳಿಬಿದ್ದು, ಇದುವರೆಗೆ 13 ಮಂದಿ ಮೃತಪಟ್ಟಿದ್ದಾರೆ ಎಂದು ದೃಢಪಟ್ಟಿದ್ದು ಇಬ್ಬರನ್ನು ರಕ್ಷಿಸಲಾಗಿದೆ. ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದರು. ಸ್ಥಳದಲ್ಲಿರುವ ಲಭ್ಯತೆ ಪ್ರಕಾರ ನಾವು ಮೃತದೇಹಗಳ ಶವಪರೀಕ್ಷೆ ಮಾಡುತ್ತಿದ್ದೇವೆ. ಮೃತ ಕುಟುಂಬಸ್ಥರಿಗೆ ಹಾಗೂ ಗಾಯಗೊಂಡವರಿಗೆ ಮುಖ್ಯಮಂತ್ರಿ ಪರಿಹಾರ ಘೋಷಿಸಲಿದ್ದಾರೆ ಎಂದು ಡೆಹ್ರಾಡೂನ್ ಜಿಲ್ಲಾಧಿಕಾರಿ ಡಾ ಆರ್ ರಾಜೇಶ್ ಕುಮಾರ್ ಹೇಳಿದ್ದಾರೆ. 

ಸಿಎಂ ಸಂತಾಪ:ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿರುವ ಸಿಎಂ ಪುಷ್ಕರ್ ಸಿಂಗ್ ದಾಮಿ ತಕ್ಷಣವೇ ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಸಬೇಕೆಂದು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಗಾಯಗೊಂಡವರಿಗೆ ತಕ್ಷಣ ವೈದ್ಯಕೀಯ ನೆರವು ಕೂಡ ನೀಡುವಂತೆ ಸೂಚಿಸಿದ್ದಾರೆ. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.