ಎನ್ ಸಿಬಿ ಸಾಕ್ಷಿ ಗೋಸಾವಿ ವಿರುದ್ಧ ಹೊಸ ವಂಚನೆ ಪ್ರಕರಣ
ಮುಂಬೈ ನ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದ ಪ್ರಮುಖ ಸಾಕ್ಷಿ ಕಿರಣ್ ಗೋಸಾವಿ ವಿರುದ್ಧ ಪುಣೆ ಪೊಲೀಸರು ವಂಚನೆಗೆ ಸಂಬಂಧಿಸಿದ ಹೊಸ ಪ್ರಕರಣವೊಂದನ್ನು ದಾಖಲಿಸಿದ್ದಾರೆ.

ಮುಂಬೈ: ಮುಂಬೈ ನ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದ ಪ್ರಮುಖ ಸಾಕ್ಷಿ ಕಿರಣ್ ಗೋಸಾವಿ ವಿರುದ್ಧ ಪುಣೆ ಪೊಲೀಸರು ವಂಚನೆಗೆ ಸಂಬಂಧಿಸಿದ ಹೊಸ ಪ್ರಕರಣವೊಂದನ್ನು ದಾಖಲಿಸಿದ್ದಾರೆ.
"ವ್ಯಕ್ತಿಯೋರ್ವ ಕಿರಣ್ ಗೋಸಾವಿ ವಿರುದ್ಧ ಇಂತಹ ಆರೋಪ ಮಾಡಿದ್ದಾರೆ" ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರತ್ಯೇಕ ಪ್ರಕರಣ ವಾನಾವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೋಸಾವಿ ಫರಸ್ಖಾನ ಪೊಲೀಸ್ ಠಾಣೆಯ ಅಧಿಕಾರಿಗಳು ಗೋಸಾವಿಯನ್ನು 2018 ರ ಪ್ರಕರಣವೊಂದರಲ್ಲಿ ಗುರುವಾರ ಬಂಧಿಸಿದ್ದರು.
ಉದ್ಯೋಗಕ್ಕೆ ಸಂಬಂಧಿಸಿದಂತೆ ಇಬ್ಬರಿಗೆ ಭರವಸೆ ನೀಡಿ ವಂಚನೆ ಮಾಡಿದ್ದರು. ಈ ಸಂಬಂಧ ಗೋಸಾವಿಯನ್ನು ಬಂಧಿಸಿದ್ದು ನವೆಂಬರ್ 5 ವರೆಗೂ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ತಮಗೆ ಗೋಸಾವಿಯವರು ಮಲೇಷ್ಯಾದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 4 ಲಕ್ಷ ವಂಚನೆ ಮಾಡಿದ್ದಾರೆಂದು ಮೂವರು ವ್ಯಕ್ತಿಗಳಿಂದ ಪೊಲೀಸರು ಲಷ್ಕರ್ ಪೊಲೀಸ್ ಠಾಣೆಗೆ ದೂರು ಬಂದಿದೆ.
ಇದಿಷ್ಟೇ ಅಲ್ಲದೇ ಪುಣೆಯ ಹಡಪ್ಸರ್ ಪ್ರದೇಶದಿಂದ ವ್ಯಕ್ತಿಯೋರ್ವ ನೀಡಿದ್ದ ದೂರಿನ ಆಧಾರದಲ್ಲಿ ಶನಿವಾರ ರಾತ್ರಿ ಗೋಸಾವಿ ವಿರುದ್ಧ ಐಪಿಸಿ ಸೆಕ್ಷನ್ 420 (ಮೋಸ) 409 (ಕ್ರಿಮಿನಲ್ ಬ್ರೀಚ್ ಆಫ್ ಟ್ರಸ್ಟ್) ಹಾಗೂ ಶಸ್ತ್ರಾಸ್ತ್ರ ಕಾಯ್ದೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


