ದೇಶ

ಯೋಗಿ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸಿಲ್ಲವೆಂದು ಆರೋಪಿಸಿ ವಿಧಾನಸಭೆಗೆ ರಾಜಿನಾಮೆ ನೀಡಿದ ಎಸ್‌ಪಿ ಶಾಸಕ!

ರಾಜ್ಯದ ಬಿಜೆಪಿ ಸರ್ಕಾರ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿ ಅಮೇಥಿಯ ಗೌರಿಗಂಜ್ ಕ್ಷೇತ್ರದ ಸಮಾಜವಾದಿ ಪಕ್ಷದ(ಎಸ್‌ಪಿ) ಶಾಸಕ ರಾಕೇಶ್ ಪ್ರತಾಪ್ ಸಿಂಗ್ ಭಾನುವಾರ ಉತ್ತರ ಪ್ರದೇಶ ವಿಧಾನಸಭೆಗೆ ರಾಜೀನಾಮೆ ನೀಡಿದ್ದಾರೆ.

ಯೋಗಿ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸಿಲ್ಲವೆಂದು ಆರೋಪಿಸಿ ವಿಧಾನಸಭೆಗೆ ರಾಜಿನಾಮೆ ನೀಡಿದ ಎಸ್‌ಪಿ ಶಾಸಕ!
ಯೋಗಿ ಆದಿತ್ಯನಾಥ
Published On :

ಲಖನೌ: ರಾಜ್ಯದ ಬಿಜೆಪಿ ಸರ್ಕಾರ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿ ಅಮೇಥಿಯ ಗೌರಿಗಂಜ್ ಕ್ಷೇತ್ರದ ಸಮಾಜವಾದಿ ಪಕ್ಷದ(ಎಸ್‌ಪಿ) ಶಾಸಕ ರಾಕೇಶ್ ಪ್ರತಾಪ್ ಸಿಂಗ್ ಭಾನುವಾರ ಉತ್ತರ ಪ್ರದೇಶ ವಿಧಾನಸಭೆಗೆ ರಾಜೀನಾಮೆ ನೀಡಿದ್ದಾರೆ.

ರಾಜಿನಾಮೆ ನೀಡಿದ ಬಳಿಕ ಮಾತನಾಡಿದ ಪ್ರತಾಪ್ ಸಿಂಗ್, ಯುಪಿ ವಿಧಾನಸಭೆಯ ಸ್ಪೀಕರ್ ಹೃದಯ ನಾರಾಯಣ ದೀಕ್ಷಿತ್ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದ್ದೇನೆ ಎಂದರು.

ಬಿಜೆಪಿ ಸರ್ಕಾರವು ಸುಳ್ಳುಗಳನ್ನು ಹೇಳುತ್ತಿದೆ. ಕೆಲ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಯೋಗಿ ಸರ್ಕಾರ ನೀಡಿತ್ತು. ಆದರೆ ಬೇಡಿಕೆಗಳು ಈಡೇರಿಲ್ಲ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಪೀಕರ್ ದೀಕ್ಷಿತ್ ಅವರು, ಶಾಸಕ ರಾಕೇಶ್ ಪ್ರತಾಪ್ ಸಿಂಗ್ ಇಂದು ನನ್ನನ್ನು ಭೇಟಿಯಾಗಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಈ ವಿಷಯವನ್ನು ನಿಯಮಾನುಸಾರ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.