ಪದ್ಮ ಪ್ರಶಸ್ತಿಗಾಗಿ ಪ್ರತಿಭಾವಂತ ಸಾಧಕರನ್ನು ಗುರುತಿಸಿ: ದೇಶದ ಜನತೆಗೆ ಕೇಂದ್ರ ಮನವಿ
ಪದ್ಮ ಪ್ರಶಸ್ತಿಗಾಗಿ ನಿಜವಾಗಿಯೂ ಶ್ರೇಷ್ಠತೆ ಮತ್ತು ಸಾಧನೆಗೆ ಅರ್ಹರಾಗಿರುವ ಪ್ರತಿಭಾವಂತ ವ್ಯಕ್ತಿಗಳ ಹೆಸರನ್ನು ಗುರುತಿಸಿ ಶಿಫಾರಸು ಮಾಡುವಂತೆ ಕೇಂದ್ರ ಸರ್ಕಾರ ಬುಧವಾರ ದೇಶದ ನಾಗರಿಕರಿಗೆ ಮನವಿ ಮಾಡಿದೆ.

ನವದೆಹಲಿ: ಪದ್ಮ ಪ್ರಶಸ್ತಿಗಾಗಿ ನಿಜವಾಗಿಯೂ ಶ್ರೇಷ್ಠತೆ ಮತ್ತು ಸಾಧನೆಗೆ ಅರ್ಹರಾಗಿರುವ ಪ್ರತಿಭಾವಂತ ವ್ಯಕ್ತಿಗಳ ಹೆಸರನ್ನು ಗುರುತಿಸಿ ಶಿಫಾರಸು ಮಾಡುವಂತೆ ಕೇಂದ್ರ ಸರ್ಕಾರ ಬುಧವಾರ ದೇಶದ ನಾಗರಿಕರಿಗೆ ಮನವಿ ಮಾಡಿದೆ.
ಕೇಂದ್ರ ಗೃಹ ಸಚಿವಾಲಯವು ಗಣರಾಜ್ಯೋತ್ಸವದ ಮುನ್ನಾದಿನ ಘೋಷಿಸಲಾಗುವ, ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳಿಗೆ ಆನ್‌ಲೈನ್ ನಾಮನಿರ್ದೇಶನ ಅಥವಾ ಶಿಫಾರಸುಗಳನ್ನು ಆಹ್ವಾನಿಸಿದ್ದು, ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಪದ್ಮ ಪ್ರಶಸ್ತಿಗಳಿಗಾಗಿ ನಾಮನಿರ್ದೇಶನಗಳು ಅಥವಾ ಶಿಫಾರಸುಗಳನ್ನು ಆನ್‌ಲೈನ್‌ನಲ್ಲಿ ಪದ್ಮ ಪ್ರಶಸ್ತಿ ಪೋರ್ಟಲ್ HYPERLINK "https://padmaawards.gov.in/" ನಲ್ಲಿ ಮಾತ್ರ ಸ್ವೀಕರಿಸಲಾಗುತ್ತದೆ.
ಪದ್ಮ ಪ್ರಶಸ್ತಿಗಳನ್ನು 'ಜನರ ಪದ್ಮ'ವಾಗಿ ಪರಿವರ್ತಿಸಲು ಸರ್ಕಾರ ಬದ್ಧವಾಗಿದೆ. ಆದ್ದರಿಂದ ಮಹಿಳೆಯರು, ಎಸ್‌ಸಿ, ಎಸ್‌ಟಿ, ದಿವ್ಯಾಂಗ ವ್ಯಕ್ತಿಗಳು ಮತ್ತು ಸಮಾಜಕ್ಕೆ ನಿಸ್ವಾರ್ಥ ಸೇವೆ ಮಾಡುತ್ತಿರುವ ಪ್ರತಿಭಾವಂತ ವ್ಯಕ್ತಿಗಳನ್ನು ಗುರುತಿಸಲು ಎಲ್ಲ ನಾಗರಿಕರಿಗೆ ಕೇಂದ್ರ ಸರ್ಕಾರ ವಿನಂತಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


