5-18 ವರ್ಷದ ಮಕ್ಕಳ ಮೇಲೆ 'ಬಯೋಲಾಜಿಕಲ್ ಇ' ಲಸಿಕೆ ಪ್ರಯೋಗಕ್ಕೆ ಡಿಸಿಜಿಐ ಅನುಮತಿ
ಕೆಲವೊಂದು ಷರತ್ತುಗಳೊಂದಿಗೆ 5 ರಿಂದ 18 ವರ್ಷದೊಳಗಿನ ಮಕ್ಕಳ ಮೇಲೆ ಹೈದ್ರಾಬಾದ್ ಮೂಲದ ಬಯೋಲಾಜಿಕಲ್ ಇ ಲಿಮಿಟೆಡ್ ತಯಾರಿಸಿರುವ ಸ್ವದೇಶಿ ಕೋವಿಡ್-19 ಲಸಿಕೆಯ ಎರಡು ಮತ್ತು ಮೂರನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ (ಡಿಸಿಜಿಐ) ಅನುಮತಿ ನೀಡಿದೆ ಎಂದು ಮೂಲಗಳು ಹೇಳಿವೆ.

ನವದೆಹಲಿ: ಕೆಲವೊಂದು ಷರತ್ತುಗಳೊಂದಿಗೆ 5 ರಿಂದ 18 ವರ್ಷದೊಳಗಿನ ಮಕ್ಕಳ ಮೇಲೆ ಹೈದ್ರಾಬಾದ್ ಮೂಲದ ಬಯೋಲಾಜಿಕಲ್ ಇ ಲಿಮಿಟೆಡ್ ತಯಾರಿಸಿರುವ ಸ್ವದೇಶಿ ಕೋವಿಡ್-19 ಲಸಿಕೆಯ ಎರಡು ಮತ್ತು ಮೂರನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ (ಡಿಸಿಜಿಐ) ಅನುಮತಿ ನೀಡಿದೆ ಎಂದು ಮೂಲಗಳು ಹೇಳಿವೆ.
ಅನುಮೋದಿತ ಶಿಷ್ಟಾಚಾರದ ಪ್ರಕಾರ ದೇಶದ ಹತ್ತು ಕಡೆಗಳಲ್ಲಿ ಎರಡು ಹಾಗೂ ಮೂರನೇ ಹಂತದ ಪ್ರಯೋಗಗಳು ನಡೆಯಲಿದ್ದು, ಕೋವಿಡ್-19 ಕುರಿತ ವಿಷಯ ತಜ್ಞರ ಸಮಿತಿ ಶಿಫಾರಸ್ಸಿನ ಆಧಾರದ ಮೇಲೆ ಡಿಸಿಜಿಐ ಅನುಮತಿ ನೀಡಿದೆ.
ಈವರೆಗೆ ದೇಶದಲ್ಲಿ 12 ರಿಂದ 18 ವರ್ಷದೊಳಗಿನವರಿಗಾಗಿ ಜಿಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿರುವ ಸೂಜಿ ರಹಿತ ಕೋವಿಡ್-19 ಲಸಿಕೆ ಜಿಕೋವ್- ಡಿ ತುರ್ತು ಬಳಕೆಗೆ ಔಷಧ ನಿಯಂತ್ರಕರಿಂದ ಅನುಮತಿ ಸಿಕ್ಕಿದೆ.
ಈ ಮಧ್ಯೆ 2 ರಿಂದ 18 ವರ್ಷದೊಳಗಿನವರಿಗಾಗಿ ಭಾರತ್ ಬಯೋಟೆಕ್ ತಯಾರಿಸಿರುವ ಕೋವಾಕ್ಸಿನ್ ಲಸಿಕೆಯ ಎರಡು ಹಾಗೂ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ನಡೆಯುತ್ತಿದೆ. ಕೆಲವೊಂದು ಷರತ್ತುಗಳೊಂದಿಗೆ 2 ರಿಂದ 17 ವರ್ಷದ ಮಕ್ಕಳ ಮೇಲೆ ಕೋವೊವ್ಯಾಕ್ಸ್ ನ ಎರಡು ಹಾಗೂ ಮೂರನೇ ಹಂತದ ಪ್ರಯೋಗ ನಡೆಸಲು ಸೆರಂ ಇನ್ಸಿಟಿಟ್ಯೂಟ್ ಗೆ ಭಾರತೀಯ ಔಷಧ ನಿಯಂತ್ರಕ ಮಂಡಳಿ ಅನುಮತಿ ನೀಡಿದೆ.
ಹದಿಹರೆದವರ ಮೇಲೆ ಬಯೋಲಾಜಿಕಲ್ ಇ ಕಂಪನಿಯ ಕೊರೋನಾ ವಿರೋಧಿ ಲಸಿಕೆ ಕಾರ್ಬೆವಾಕ್ಸ್ ನ ಎರಡು ಹಾಗೂ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ನಡೆಯುತ್ತಿರುವುದಾಗಿ ಮೂಲಗಳು ಈ ಹಿಂದೆ ಹೇಳಿದ್ದವು. ಡಿಸೆಂಬರ್ ಅಂತ್ಯದೊಳಗೆ 30 ಕೋಟಿ ಡೋಸ್ ಕಾರ್ಬೆವಾಕ್ಸ್ ನ್ನು ಕೇಂದ್ರ ಸರ್ಕಾರಕ್ಕೆ ಬಯೋಲಾಜಿಕಲ್ ಇ ಕಂಪನಿ ಪೂರೈಸಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಜೂನ್ ನಲ್ಲಿ ತಿಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


