ಮಾಜಿ ರಾಜ್ಯಸಭಾ ಸಂಸದ, ಹಿರಿಯ ಪತ್ರಕರ್ತ ಚಂದನ್ ಮಿತ್ರಾ ನಿಧನ
ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಖ್ಯಾತ ಹಿರಿಯ ಪತ್ರಕರ್ತ ಚಂದನ್ ಮಿತ್ರಾ ಅವರು ಗುರುವಾರ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.

ನವದೆಹಲಿ: ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಖ್ಯಾತ ಹಿರಿಯ ಪತ್ರಕರ್ತ ಚಂದನ್ ಮಿತ್ರಾ ಅವರು ಗುರುವಾರ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.
ಈ ಕುರಿತಂತೆ ಚಂದನ್ ಮಿತ್ರಾ ಅವರ ಪುತ್ರ ಕುಶನ್ ಮಿತ್ರಾ ಅವರು ಮಾಹಿತಿ ನೀಡಿದ್ದು, ಟ್ವೀಟ್ ಮಾಡಿ ತಮ್ಮ ನೋವು ಹಂಚಿಕೊಂಡಿದ್ದಾರೆ. ಕಳೆದ ರಾತ್ರ ನಮ್ಮ ತಂದೆ ಚಂದನ್ ಮಿತ್ರಾ ಅವರು ನಿಧನರಾಗಿದ್ದು, ಕಳೆದ ಹಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಚಂದನ್ ಮಿತ್ರಾ ದೆಹಲಿಯ ದಿ ಪಯೋನಿಯರ್ ಪತ್ರಿಕೆಯ ಸಂಪಾದಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಅಲ್ಲದೆ ಅವರು ಎರಡು ಬಾರಿ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು - ಮೊದಲಿಗೆ 2003 ರಿಂದ 2009 ರವರೆಗೆ ನಾಮನಿರ್ದೇಶಿತ ಸಂಸದರಾಗಿ ಮತ್ತು 2010 ರಿಂದ 2016 ರವರೆಗೆ ಮಧ್ಯಪ್ರದೇಶದಿಂದ ಭಾರತೀಯ ಜನತಾ ಪಕ್ಷದ ಸಂಸದರಾಗಿ ಆಯ್ಕೆಯಾಗಿದ್ದರು. 2018 ರಲ್ಲಿ ಮಿತ್ರಾ ಬಿಜೆಪಿ ತೊರೆದು ತೃಣಮೂಲ ಕಾಂಗ್ರೆಸ್ ಸೇರಿದ್ದರು.
ಪ್ರಧಾನಿ ಮೋದಿ ಕಂಬನಿ
ಇನ್ನು ಇಂದು ನಿಧನರಾದ ಹಿರಿಯ ಪತ್ರಕರ್ತ ಚಂದನ್ ಮಿತ್ರಾ ಅವರ ಸಾವಿಗೆ ಪ್ರಧಾನಿ ಮೋದಿ ಕಂಬನಿ ಮಿಡಿದಿದ್ದು, 'ಚಂದನ್ ಮಿತ್ರ ಅವರು ತಮ್ಮ ಬುದ್ಧಿಶಕ್ತಿ ಮತ್ತು ಒಳನೋಟಗಳಿಂದ ನೆನಪಿನಲ್ಲಿ ಉಳಿಯುತ್ತಾರೆ. ಅವರು ಮಾಧ್ಯಮ ಹಾಗೂ ರಾಜಕೀಯ ಜಗತ್ತಿನಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


