ಕೊಲ್ಲಂ ಕರಾವಳಿಯಲ್ಲಿ ದೋಣಿ ಮುಳುಗಿ ನಾಲ್ವರು ಮೀನುಗಾರರು ಸಾವು, 12 ಮಂದಿ ರಕ್ಷಣೆ
ಕೊಲ್ಲಂ ಕರಾವಳಿಯ ಅಝಿಕಲ್ ಬಳಿ ಗುರುವಾರ ಮುಂಜಾನೆ ಮೀನುಗಾರಿಕಾ ದೋಣಿ ಮುಳುಗಿ ನಾಲ್ವರು ಮೀನುಗಾರರು ಸಾವನ್ನಪ್ಪಿದ್ದಾರೆ. ದೋಣಿಯಲ್ಲಿದ್ದ ಇತರ 12 ಜನರನ್ನು ರಕ್ಷಿಸಲಾಗಿದೆ.

ಕೊಲ್ಲಂ: ಕೊಲ್ಲಂ ಕರಾವಳಿಯ ಅಝಿಕಲ್ ಬಳಿ ಗುರುವಾರ ಮುಂಜಾನೆ ಮೀನುಗಾರಿಕಾ ದೋಣಿ ಮುಳುಗಿ ನಾಲ್ವರು ಮೀನುಗಾರರು ಸಾವನ್ನಪ್ಪಿದ್ದಾರೆ. ದೋಣಿಯಲ್ಲಿದ್ದ ಇತರ 12 ಜನರನ್ನು ರಕ್ಷಿಸಲಾಗಿದೆ.
ಮೃತಪಟ್ಟವರನ್ನು ಕಾಯಂಕುಳಂ ನಿವಾಸಿಗಳಾದ ಸುದೇವನ್(51), ಸುನಿಲ್ ದತ್ (24), ಓಚಿರಾ ನಿವಾಸಿಗಳಾದ ಶ್ರೀಕುಮಾರ್ (45) ಮತ್ತು ನೆಡಿಯತ್‌ನ ತಂಕಪ್ಪನ್ (60) ಎಂದು ಗುರುತಿಸಲಾಗಿದೆ.
ಕರಾವಳಿ ಪೊಲೀಸರ ಪ್ರಕಾರ, ಇಂದು ಬೆಳಗ್ಗೆ 5.30 ರ ಸುಮಾರಿಗೆ ಮೀನುಗಾರಿಕೆಗೆ ಅಲಪುಳಾದ ವಲಿಯಾ ಅಝಿಕಲ್ ಕರಾವಳಿಯಿಂದ ಹೊರಟ 'ಓಮಕರಂ' ಹೆಸರಿನ ದೋಣಿಯಲ್ಲಿ 16 ಮೀನುಗಾರರಿದ್ದರು. ಅಝಿಕಲ್ ಬಂದರಿನಿಂದ ಐದು ನಾಟಿಕಲ್ ಮೈಲಿ ದೂರದಲ್ಲಿ ಈ ಘಟನೆ ನಡೆದಿದೆ.
ಮೀನುಗಾರರು ಮೀನುಗಾರಿಕೆ ಮುಗಿಸಿ ವಾಪಸ್ ಬರುತ್ತಿದ್ದಾಗ ದೋಣಿ ಅಪಘಾತಕ್ಕೀಡಾಗಿದೆ. ಬಲವಾದ ಗಾಳಿಯಿಂದಾಗಿ ದೋಣಿ ಮಗುಚಿದೆ ಎಂದು ಹೇಳಲಾಗಿದೆ.
ದಡದಲ್ಲಿ ಅನೇಕ ಮೀನುಗಾರರು ಇದ್ದ ಕಾರಣ, ಅವರು ತಕ್ಷಣ ರಕ್ಷಣಾ ಕಾರ್ಯಾಚರಣೆಗೆ ಧಾವಿಸಿ, 12 ಮೀನುಗಾರರನ್ನು
ರಕ್ಷಿಸಿ ಚಿಕಿತ್ಸೆಗಾಗಿ ಕಾಯಂಕುಳಂ, ಓಚಿರಾ ಮತ್ತು ಕರುಣಗಪ್ಪಲ್ಲಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


