ಕಾಬೂಲ್‌ನ ಭಾರತೀಯ ರಾಯಭಾರಿ ಕಚೇರಿ ಸುರಕ್ಷಿತವಾಗಿದ್ದು, ಸಿಬ್ಬಂದಿಗೆ ವೇತನವೂ ಪಾವತಿಯಾಗುತ್ತಿದೆ: ವಿದೇಶಾಂಗ ಸಚಿವಾಲಯ
ಕಾಬೂಲ್‌ನಲ್ಲಿರುವ ಭಾರತೀಯ ರಾಯಭಾರಿ ಸಿಬ್ಬಂದಿಗೆ ಯಾವುದೇ ಸಮಸ್ಯೆ ಆಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದು, ಸಮಯಕ್ಕೆ ಸರಿಯಾಗಿ ವೇತನ ಕೂಡ ಪಾವತಿಯಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ.

ನವದೆಹಲಿ: ಕಾಬೂಲ್‌ನಲ್ಲಿರುವ ಭಾರತೀಯ ರಾಯಭಾರಿ ಸಿಬ್ಬಂದಿಗೆ ಯಾವುದೇ ಸಮಸ್ಯೆ ಆಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದು, ಸಮಯಕ್ಕೆ ಸರಿಯಾಗಿ ವೇತನ ಕೂಡ ಪಾವತಿಯಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ಸ್ಪಷ್ಟಪಡಿಸಿದೆ.
ತಾಲಿಬಾನ್ ಆಡಳಿತಕ್ಕೆ ಸಜ್ಜಾಗಿರುವ ಅಫ್ಘಾನ್ ರಾಜಧಾನಿ ಕಾಬೂಲ್‌ನಲ್ಲಿ ಭಾರತೀಯ ರಾಯಭಾರಿ ಕಚೇರಿ ಇದ್ದು, ರಾಯಭಾರಿ ಕಚೇರಿ ಸುರಕ್ಷಿತವಾಗಿದ್ದು, ರಾಯಭಾರಿ ಕಚೇರಿ ಸಿಬ್ಬಂದಿಗೆ ಸರಿಯಾದ ಸಮಯಕ್ಕೆ ವೇತನ ಪಾವತಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕಾಬೂಲ್‌ನಲ್ಲಿರುವ ರಾಯಭಾರಿಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿ ಇದೆ. ಅಲ್ಲಿರುವ ನಮ್ಮ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಅಫ್ಘಾನ್‌ನಲ್ಲಿ ಸದ್ಯ ಉಂಟಾಗಿರುವ ಬಿಕ್ಕಟ್ಟಿನಿಂದ ಅಲ್ಲಿನ ಬ್ಯಾಂಕುಗಳ ಸೇವೆ ಸ್ಥಗಿತವಾಗಿದೆ.
ಹಣ ಡ್ರಾ ಮಾಡಿಕೊಳ್ಳಲು ರಾಯಭಾರಿ ಸಿಬ್ಬಂದಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ ಎಂಬ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಅಧಿಕಾರಿಗಳು, ಹಲವು ಭಾರತೀಯರು ಕಾಬೂಲ್‌ನಿಂದ ವಾಪಸ್ ಆಗಿದ್ದಾರೆ. ಅಲ್ಲಿರುವ ನಮ್ಮ ಸಿಬ್ಬಂದಿ ಏರ್‌ಲಿಫ್ಟ್‌ಗೆ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಆದರೆ ಕಾಬೂಲ್ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. ವಿಮಾನಗಳ ಹಾರಾಟವನ್ನು ತಾಲಿಬಾನ್‌ಗಳು ರದ್ದು ಮಾಡಿದ್ದಾರೆ ಎಂದು ಹೇಳಿದ್ದಾರೆ.
ಕಾಬೂಲ್‌ನಲ್ಲಿ ಸಿಲುಕಿರುವ ಉಳಿದ ಭಾರತೀಯರನ್ನು ವಾಪಸ್ ಕರೆ ತರಲು ಮತ್ತೆ ಸ್ಥಳಾಂತರ ಕಾರ್ಯಾಚರಣೆ ಶೀಘ್ರವೇ ಆರಂಭಿಸುವ ಸಾಧ್ಯತೆ ಇದೆ. ಈ ವಿಚಾರವಾಗಿ ಸರ್ಕಾರ ಕಾಬೂಲ್ ಹಾಗೂ ಅಲ್ಲಿನ ರಾಯಭಾರಿ ಸಿಬ್ಬಂದಿ ಜೊತೆ ಸಂಪರ್ಕದಲ್ಲಿ ಇದ್ದೇವೆ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ. ಆದರೆ, ಪ್ರಸ್ತುತ ಎಷ್ಟು ಮಂದಿ ಭಾರತೀಯರು ಕಾಬೂಲ್‌ನಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿ ನೀಡಿಲ್ಲ.
ಉಳಿದವರನ್ನು ಕರೆತರಲು ತಾಲಿಬಾನ್ ಸರ್ಕಾರದ ಜೊತೆ ಭಾರತ ಹೇಗೆ ವ್ಯವಹಾರ ನಡೆಸುತ್ತೆ ಎಂಬುದರ ಮೇಲೆ ಮುಂದಿನ ನಿರ್ಧಾರವಾಗುತ್ತೆ ಎಂದು ಮೂಲಗಳು ತಿಳಿಸಿವೆ.
ಕಾಬೂಲ್, ದುಶಾಂಬೆ ವಿಮಾನ ನಿಲ್ದಾಣದ ಮೂಲಕ ಈವರೆಗೆ 550 ಮಂದಿಯನ್ನು ಕೇಂದ್ರ ಸರ್ಕಾರ ಸ್ಥಳಾಂತರಿಸಿದೆ. ಇದರಲ್ಲಿ 260 ಮಂದಿ ಭಾರತೀಯ ಇದ್ದಾರೆ. ಇತರ ದೇಶಗಳ ಏಜೆನ್ಸಿಗಳ ಮೂಲಕವೂ ಭಾರತೀಯರನ್ನು ಏರ್‌ಲಿಫ್ಟ್ ಮಾಡುವ ಕೆಲಸವನ್ನು ಸರ್ಕಾರ ಮಾಡಿದೆ. ಅಮೆರಿಕಾ, ತಜಿಕಿಸ್ತಾನ ಸೇರಿದಂತೆ ಇತರ ದೇಶಗಳ ಸಂಪರ್ಕದಲ್ಲಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರರು ಈ ಹಿಂದೆ ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


