ಕೇರಳದ ಕೋಳಿಕೋಡ್'ನಲ್ಲಿ ನಿಫಾ ವೈರಸ್ ಪತ್ತೆ; 13 ವರ್ಷದ ಬಾಲಕ ಆಸ್ಪತ್ರೆಗೆ ದಾಖಲು
ಕೇರಳದ ರಾಜ್ಯದ ಕೋಳಿಕೋಡ್ ನಲ್ಲಿ ನಿಫಾ ವೈರಸ್ ಸೋಂಕನ್ನು ಹೋಲುವ ಲಕ್ಷಣಗಳನ್ನು ಹೊಂದಿದ್ದ 13 ವರ್ಷದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ಭಾನುವಾರ ತಿಳಿಸಿವೆ.

ಕೋಳಿಕೋಡ್: ಕೇರಳದ ರಾಜ್ಯದ ಕೋಳಿಕೋಡ್ ನಲ್ಲಿ ನಿಫಾ ವೈರಸ್ ಸೋಂಕನ್ನು ಹೋಲುವ ಲಕ್ಷಣಗಳನ್ನು ಹೊಂದಿದ್ದ 13 ವರ್ಷದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ಭಾನುವಾರ ತಿಳಿಸಿವೆ.
ಸೋಂಕಿಗೊಳಗಾಗಿರುವ ಬಾಲಕ ಛತಮಂಗಳಂ ಹತ್ತಿರ ಬಳಿಯಿರುವ ಚುಲೂರ್ ಮೂಲದವನಾಗಿದ್ದಾನೆಂದು ತಿಳಿದುಬಂದಿದೆ.
ನಿಫಾ ಸೋಂಕಿನ ಶಂಕೆ ವ್ಯಕ್ತವಾಗಿರುವ ಮಾಹಿತಿಯ ನಂತರ ರಾಜ್ಯ ಸರ್ಕಾರ ಶನಿವಾರ ತಡರಾತ್ರಿ ಆರೋಗ್ಯ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿವೆ.
ಕೆಲ ದಿನಗಳ ಹಿಂದಷ್ಟೇ ಬಾಲಕ ಅತೀವ್ರ ಜ್ವರದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದ. ಪ್ರಥಮಿಕ ಪರೀಕ್ಷೆಗಳಿಂದ ಬಾಲಕನಿಗೆ ನಿಫಾ ವೈರಸ್ ಸೋಂಕು ಇರುವ ಶಂಕೆಗಳು ವ್ಯಕ್ತವಾಗಿವೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ನಿಫಾ ವೈರಸ್ ಇರುವ ಬಗ್ಗೆ ರಾಜ್ಯ ಸರ್ಕಾರ ಇನ್ನೂ ಅಧಿಕೃತವಾಗಿ ಘೋಷಿಸದಿದ್ದರೂ, ಆರೋಗ್ಯ ಸಚಿವರು ಭಾನುವಾರ ಬೆಳಿಗ್ಗೆ ಕೋಳಿಕೋಡ್‌ಗೆ ಧಾವಿಸಿ ಪರಿಸ್ಥಿತಿಯ ಅವಲೋಕನ ನಡೆಸಬಹುದು ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗಾಗಿ ನೀರೀಕ್ಷಿಸಲಾಗುತ್ತಿದೆ.
ದಕ್ಷಿಣ ಭಾರತದಲ್ಲಿ ಮೊದಲ ನಿಫಾ ವೈರಸ್ ರೋಗ (ಎನ್ಐವಿ) ಮೇ 19, 2018 ರಂದು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ವರದಿಯಾಗಿತ್ತು. 2018ರ ಜೂನ್ 1 ರವರೆಗೆ ರಾಜ್ಯದಲ್ಲಿ 17 ಸಾವುಗಳಿಗೆ ಮತ್ತು 18 ದೃಢಪಟ್ಟ ಪ್ರಕರಣಗಳು ವರದಿಯಾಗಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


