ಕಳೆದ 11 ದಿನಗಳಲ್ಲಿ 3ನೇ ಬಾರಿಗೆ ಒಂದು ಕೋಟಿ ಡೋಸ್ ದಾಟಿದ ದೈನಂದಿನ ಕೋವಿಡ್ ಲಸಿಕೆ
ಕಳೆದ 11 ದಿನಗಳಲ್ಲಿ ಮೂರನೇ ಬಾರಿಗೆ ಒಂದು ದಿನದಲ್ಲಿ ಒಂದು ಕೋಟಿ ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದ್ದು, ಇದರೊಂದಿಗೆ ದೇಶದಲ್ಲಿ ಇದುವರೆಗೆ 69.68 ಕೋಟಿ ಡೋಸ್ ಲಸಿಕೆ ನೀಡಿದಂತಾಗಿದೆ...

ನವದೆಹಲಿ: ಕಳೆದ 11 ದಿನಗಳಲ್ಲಿ ಮೂರನೇ ಬಾರಿಗೆ ಒಂದು ದಿನದಲ್ಲಿ ಒಂದು ಕೋಟಿ ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದ್ದು, ಇದರೊಂದಿಗೆ ದೇಶದಲ್ಲಿ ಇದುವರೆಗೆ 69.68 ಕೋಟಿ ಡೋಸ್ ಲಸಿಕೆ ನೀಡಿದಂತಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
"ಇಂದು ದೇಶಾದ್ಯಂತ 1 ಕೋಟಿ ಕೋವಿಡ್ ಲಸಿಕೆ ನೀಡಲಾಗಿದೆ. ಇದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ವಿಶ್ವದ ಅತಿದೊಡ್ಡ ವ್ಯಾಕ್ಸಿನೇಷನ್ ಅಭಿಯಾನವು ಬೃಹತ್ ಸಾಧನೆ ಮಾಡಿದೆ" ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಟ್ವೀಟ್ ಮಾಡಿದ್ದಾರೆ.
ಇಂದು ಸಂಜೆ 7 ಗಂಟೆಯವರೆಗೆ ಒಟ್ಟು 1,05,76,911 ಡೋಸ್‌ಗಳನ್ನು ನೀಡಲಾಗಿದ್ದು, ತಡರಾತ್ರಿಯ ವೇಳೆಗೆ ದಿನದ ಅಂತಿಮ ವರದಿಗಳ ಬಂದಾಗ ಈ ಸಂಖ್ಯೆ ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಶದಲ್ಲಿ ಇದುವರೆಗೆ 53,29,27,201 ಫಲಾನುಭವಿಗಳಿಗೆ ಮೊದಲ ಡೋಸ್ ಮತ್ತು 16,39,69,127 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಒಟ್ಟಾರೆಯಾಗಿ, 18-44 ವಯಸ್ಸಿನ ಗುಂಪಿನಲ್ಲಿ 27,64,10,694 ಜನರು ತಮ್ಮ ಮೊದಲ ಡೋಸ್ ಮತ್ತು 3,57,76,726 ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


