ಇಂದು ಕೋವಿಡ್ ವ್ಯಾಕ್ಸಿನೇಷನ್ ಮತ್ತು ಕ್ರಿಕೆಟ್ ಪಿಚ್ ಗೆ ಅತ್ಯಂತ ಮಹತ್ವದ ದಿನ: ಪ್ರಧಾನಿ ಮೋದಿ
ಸೋಮವಾರ ಮತ್ತೊಮ್ಮೆ ಒಂದೇ ದಿನದಲ್ಲಿ ಒಂದು ಕೋಟಿಗೂ ಹೆಚ್ಚು ಡೋಸ್ ಕೋವಿಡ್ -19 ಲಸಿಕೆ ನೀಡಿದ ಆಡಳಿತವನ್ನು ಮತ್ತು ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸಿದ ಭಾರತ ತಂಡವನ್ನು ಪ್ರಧಾನಿ ನರೇಂದ್ರ ಮೋದಿ...

ನವದೆಹಲಿ: ಸೋಮವಾರ ಮತ್ತೊಮ್ಮೆ ಒಂದೇ ದಿನದಲ್ಲಿ ಒಂದು ಕೋಟಿಗೂ ಹೆಚ್ಚು ಡೋಸ್ ಕೋವಿಡ್ -19 ಲಸಿಕೆ ನೀಡಿದ ಆಡಳಿತವನ್ನು ಮತ್ತು ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸಿದ ಭಾರತ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.
ಕೋವಿಡ್ ವ್ಯಾಕ್ಸಿನೇಷನ್ ವಿಚಾರದಲ್ಲಿ ಮತ್ತು ಕ್ರಿಕೆಟ್ ಪಿಚ್ ಗೆ ಇಂದು ಅತ್ಯಂತ ಮಹತ್ವದ ದಿನ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಕಳೆದ 11 ದಿನಗಳಲ್ಲಿ ಮೂರನೇ ಬಾರಿಗೆ, ಒಂದು ದಿನದಲ್ಲಿ ಒಂದು ಕೋಟಿ ಡೋಸ್ ಕೋವಿಡ್ -19 ಲಸಿಕೆ ನೀಡಿದ್ದು, ಇದರೊಂದಿಗೆ ದೇಶದಲ್ಲಿ ಕೋವಿಡ್ ಲಸಿಕೆ ಪಡೆದವರ ಸಂಖ್ಯೆ 69.68 ಕೋಟಿಗೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇನ್ನು ಕ್ರಿಕೆಟ್ ನಲ್ಲಿ, ಲಂಡನ್ ನ ಓವಲ್ ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ, ಇಂಗ್ಲೆಂಡ್ ಅನ್ನು 157 ರನ್ ಗಳಿಂದ ಸೋಲಿಸುವ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


