ದೇಶ

ಆರೆಸ್ಸೆಸ್ ಅನ್ನು ತಾಲಿಬಾನ್ ಜೊತೆ ಹೋಲಿಸುವುದು ಹಿಂದೂ ಸಂಸ್ಕೃತಿ ಅವಮಾನಿಸಿದಂತೆ: ಜಾವೆದ್ ಅಖ್ತರ್ ವಿರುದ್ಧ ಶಿವಸೇನಾ ಆಕ್ರೋಶ

ತಾಲಿಬಾನ್ ಮನೋಧರ್ಮ ಅತ್ಯಂತ ಅಪಾಯಕಾರಿಯಾದದ್ದು ಹಾಗೆಯೇ ಆರೆಸ್ಸೆಸ್, ವಿಎಚ್ ಪಿ ಮತ್ತು ಭಜರಂಗದಳ ಎಂದು ಜಾವೆದ್ ಅಖ್ತರ್ ಹೇಳಿಕೆ ನೀಡಿದ್ದರು.

ಆರೆಸ್ಸೆಸ್ ಅನ್ನು ತಾಲಿಬಾನ್ ಜೊತೆ ಹೋಲಿಸುವುದು ಹಿಂದೂ ಸಂಸ್ಕೃತಿ ಅವಮಾನಿಸಿದಂತೆ: ಜಾವೆದ್ ಅಖ್ತರ್ ವಿರುದ್ಧ ಶಿವಸೇನಾ ಆಕ್ರೋಶ
ಸಾಂದರ್ಭಿಕ ಚಿತ್ರ
Published On :

ಮುಂಬೈ: ಶಿವಸೇನಾ ತನ್ನ ಮುಖವಾಣಿ ಸಾಮ್ನಾ ಪತ್ರಿಕೆಯಲ್ಲಿ ಜಾವೇದ್ ಅಖ್ತರ್ ಹೇಳಿಕೆಗೆ ಕಿಡಿ ಕಾರಿದ್ದರು. ಆರೆಸ್ಸೆಸ್ ಅನ್ನು ತಾಲಿಬಾನ್ ಮನೋಧರ್ಮಕ್ಕೆ ಹೋಲಿಸುವವರು ಮೊದಲು ಆ ವಿಚಾರವನ್ನು ಸ್ಥೂಲವಾಗಿ ಪರಾಮರ್ಶಿಸಬೇಕು ಎಂದು ಶಿವಸೇನಾ ಆಕ್ರೋಶ ವ್ಯಕ್ತಪಡಿಸಿದೆ. 

ಇತ್ತೀಚಿಗೆ ಪತ್ರಿಕಾ ಸಂದರ್ಶನವೊಂದರಲ್ಲಿ ಬಾಲಿವುಡ್ ಗೀತ ರಚನೆಕಾರ, ಸಾಹಿತಿ ಜಾವೆದ್ ಅಖ್ತರ್ ಅವರು ಆರೆಸ್ಸೆಸ್, ವಿಶ್ವ ಹಿಂದೂ ಪರಿಷದ್ ಮತ್ತು ಭಜರಂಗದಳವನ್ನು ತಾಲಿಬಾನಿಗೆ ಹೋಲಿಸಿ ಮಾತನಾಡಿದ್ದರು. ತಾಲಿಬಾನ್ ಮನೋಧರ್ಮ ಅತ್ಯಂತ ಅಪಾಯಕಾರಿಯಾದದ್ದು ಹಾಗೆಯೇ ಆರೆಸ್ಸೆಸ್, ವಿಎಚ್ ಪಿ ಮತ್ತು ಭಜರಂಗದಳ ಎಂದು ಅವರು ಹೇಳಿಕೆ ನೀಡಿದ್ದರು.

ಜಾವೆದ್ ಅಖ್ತರ್ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಜಾವೆದ್ ಅಖ್ತರ್ ಹಾಗೂ ಅವರ ಕುಟುಂಬಸ್ಥರು ಮಾಡುವ ಸಿನಿಮಾಗಳನ್ನು ಪ್ರದರ್ಶಿಸದಂತೆ ನಿರ್ಬಂಧ ಹೇರುವುದಾಗಿ ಹಲವು ಬಲಪಂಥೀಯ ನಾಯಕರು ಎಚ್ಚರಿಕೆ ನೀಡಿದ್ದರು.

Related Article

ತಾಲಿಬಾನ್ ವಶವಾದ ನಂತರ ಅಫ್ಘಾನಿಸ್ತಾನಕ್ಕೆ ಭಾರತದ ಸಕ್ಕರೆ ರಫ್ತು ಸಂಪೂರ್ಣ ಸ್ಥಗಿತ

ತಾಲಿಬಾನ್ ಪರ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ಸಂಸದನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

ಭಾರತ ಅಫ್ಘಾನಿಸ್ತಾನದಲ್ಲಿ ಆರಂಭಿಸಿರುವ ಯೋಜನೆಗಳನ್ನು ಪೂರ್ಣಗೊಳಿಸಲಿ: ತಾಲಿಬಾನ್ ವಕ್ತಾರ

ಅಫ್ಘಾನಿಸ್ತಾನ ತಾಲಿಬಾನ್ ವಶವಾಗುತ್ತಿದ್ದಂತೆಯೇ ಕಾಶ್ಮೀರದಲ್ಲಿ ಹಿಂಸಾಚಾರ ಉಗ್ರರ ಚಟುವಟಿಕೆ ಏರಿಕೆ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.