ಕಳೆದ ವಾರ ಭಾರತದ ಶೇ.68 ರಷ್ಟು ಕೋವಿಡ್-19 ಪ್ರಕರಣ ವರದಿಯಾಗಿದ್ದು ಕೇರಳದಿಂದ!
ಭಾರತದಲ್ಲಿ ಕೋವಿಡ್-19 ಪ್ರಕರಣಗಳು ಅತಿ ಹೆಚ್ಚಾಗಿರುವ ರಾಜ್ಯಗಳ ಪೈಕಿ ಕೇರಳ ಮುಂಚೂಣಿಯಲ್ಲಿದೆ. ಕಳೆದ ವಾರ ಭಾರತದಲ್ಲಿ ಒಟ್ಟು ವರದಿಯಾದ ಪ್ರಕರಣಗಳಲ್ಲಿ ಶೇ.68 ರಷ್ಟು ಕೇರಳದಿಂದ ವರದಿಯಾಗಿದೆ.

ನವದೆಹಲಿ: ಭಾರತದಲ್ಲಿ ಕೋವಿಡ್-19 ಪ್ರಕರಣಗಳು ಅತಿ ಹೆಚ್ಚಾಗಿರುವ ರಾಜ್ಯಗಳ ಪೈಕಿ ಕೇರಳ ಮುಂಚೂಣಿಯಲ್ಲಿದೆ. ಕಳೆದ ವಾರ ಭಾರತದಲ್ಲಿ ಒಟ್ಟು ವರದಿಯಾದ ಪ್ರಕರಣಗಳಲ್ಲಿ ಶೇ.68 ರಷ್ಟು ಕೇರಳದಿಂದ ವರದಿಯಾಗಿದೆ.
ಕಳೆದ 24 ಗಂಟೆಳಲ್ಲಿ 43,263 ಪ್ರಕರಣಗಳು ದೇಶಾದ್ಯಂತ ವರದಿಯಾಗಿದ್ದರೆ ಈ ಪೈಕಿ 32,000 ಪ್ರಕರಣಗಳು ಕೇರಳದಲ್ಲಿ ವರದಿಯಾಗಿದೆ.
ಕಳೆದ ವಾರ ಭಾರತದಲ್ಲಿ ವರದಿಯಾದ ಒಟ್ಟಾರೆ ಪ್ರಕರಣಗಳ ಪೈಕಿ ಶೇ.68 ರಷ್ಟು ಕೇರಳದಿಂದ ವರದಿಯಾಗಿತ್ತು ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ.
ಭಾರತದಲ್ಲಿ ಒಟ್ಟಾರೆ ಕೋವಿಡ್-19 ಪ್ರಕರಣಗಳು ಇಳಿಕೆಯಾಗುತ್ತಿದ್ದು ಇಳಿಕೆಯ ಟ್ರೆಂಡ್ ಮೊದಲ ಅಲೆಯಲ್ಲಿದ್ದ ಟ್ರೆಂಡ್ ನ ಶೇ.50 ಕ್ಕಿಂತ ಕಡಿಮೆ ಇದೆ. ಭಾರತದಲ್ಲಿ 2 ನೇ ಅಲೆ ಇನ್ನೂ ಇದ್ದು ಮುಕ್ತಾಯಗೊಂಡಿಲ್ಲ ಎಂದು ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


