ಮುಂಬೈ: ಸ್ಟೇಷನರಿ ಟೆಂಪೋದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ, ರಾಡ್ ನಿಂದ ಹಲ್ಲೆ
ಉಪನಗರ ಸಕಿನಾಕಾದಲ್ಲಿ ನಿಂತಿದ್ದ ಸ್ಟೇಷನರಿ ಟೆಂಪೋದಲ್ಲಿ 34 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಮಹಿಳೆ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮುಂಬೈ: ಉಪನಗರ ಸಕಿನಾಕಾದಲ್ಲಿ ನಿಂತಿದ್ದ ಸ್ಟೇಷನರಿ ಟೆಂಪೋದಲ್ಲಿ 34 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಮಹಿಳೆ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಮೋಹನ್ ಚೌಹಾಣ್(45) ಎಂಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಖೈರಾನಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಯನ್ನು ಥಳಿಸುತ್ತಿದ್ದಾನೆ ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿತು. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ರಾಜವಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಮಹಿಳೆ ಮೇಲೆ ಅತ್ಯಾಚಾರ ಎಸಗಿ, ಖಾಸಗಿ ಭಾಗದ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡಲಾಗಿದೆ. ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಟೆಂಪೋವೊಂದರಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ವಾಹನದ ಒಳಗೆ ರಕ್ತದ ಕಲೆಗಳು ಸಹ ಕಂಡುಬಂದಿವೆ. ವೈದ್ಯರ ಪ್ರಕಾರ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚೌಹಾಣ್ ಅವರನ್ನು ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಮತ್ತು 376 (ಅತ್ಯಾಚಾರ) ಅಡಿಯಲ್ಲಿ ಬಂಧಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


