ರಾಜಸ್ಥಾನದಲ್ಲಿ ಭೀಕರ ಅಪಘಾತ: ಬಸ್-ಬೊಲೆರೊ ನಡುವೆ ಡಿಕ್ಕಿ, 4 ಮಹಿಳೆಯರ ದುರ್ಮರಣ
ರಾಜಸ್ಥಾನ ರಾಜ್ಯದ ಬಾರ್ಮರ್'ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಹಾಗೂ ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

ಬಾರ್ಮರ್: ರಾಜಸ್ಥಾನ ರಾಜ್ಯದ ಬಾರ್ಮರ್'ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಹಾಗೂ ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.
ಬೊಲೆರೋ ಕ್ಯಾಂಪರ್‌ನಲ್ಲಿ ರಾಜಸ್ಥಾನದ ಲೋಹಾವತ್‌ನಿಂದ ಸುಮಾರು 18 ಮಂದಿ ತಮ್ಮ ಮನೆಗಳಿಗೆ ಹಿಂದಿರುಗುತ್ತಿದ್ದ ವೇಳೆ ಬಸ್ ಅಪ್ಪಳಿಸಿದೆ. ಬಾರ್ಮೆರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 68ರಲ್ಲಿ ದುರ್ಘಟನೆ ಸಂಭವಿಸಿದ್ದು, ಸುಮಾರು 10 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. 10 ಮಂದಿ ಪೈಕಿ ಓರ್ವ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಬೊಲೆರೋ ಕ್ಯಾಂಪರ್‌ನಲ್ಲಿ ಲೋಹಾವತ್‌ನಿಂದ ಸುಮಾರು 18 ಮಂದಿ ತಮ್ಮ ಮನೆಗಳಿಗೆ ಹಿಂದಿರುಗುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 68ರಲ್ಲಿ ಬಂದ ಬಸ್ ಕ್ಯಾಂಪರ್ಗೆ ಡಿಕ್ಕಿ ಹೊಡೆದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಜೊತೆಗೆ ಸ್ಥಳಕ್ಕೆ ಭೇಟಿ ನೀಡಿದ ಬಾರ್ಮೆರ್ ಜಿಲ್ಲಾಧಿಕಾರಿ ಲೋಕ ಬಂಧು, ಪೊಲೀಸ್ ವರಿಷ್ಠಾಧಿಕಾರಿ ಆನಂದ ಶರ್ಮಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನರಪತ್ ಸಿಂಗ್, ಹೆಚ್ಚುವರಿ ಜಿಲ್ಲಾಧಿಕಾರಿ ಓಂಪ್ರಕಾಶ್ ವಿಷ್ಣೋಯ್ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


