ಶತಮಾನೋತ್ಸವ ವರ್ಷದ ವೇಳೆಗೆ ಆರ್ ಎಸ್ ಎಸ್ ಪ್ರತಿ ಮನೆ ತಲುಪಬೇಕು: ಮೋಹನ್ ಭಾಗವತ್
ರಾಷ್ಟ್ರೀಯ ಸ್ವಯಂಸೇವಕ ಸಂಘವು ನಾಲ್ಕು ವರ್ಷಗಳ ಬಳಿಕ ತನ್ನ ಶತಮಾನೋತ್ಸವವನ್ನು ಆಚರಿಸುವ ವೇಳೆಗೆ ಸಂಘಟನೆಯ ಗುರಿಯು ಪ್ರತಿ ಮನೆಯನ್ನು ತಲುಪಿರಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ

ಜಾರ್ಖಂಡ್: ರಾಷ್ಟ್ರೀಯ ಸ್ವಯಂಸೇವಕ ಸಂಘವು ನಾಲ್ಕು ವರ್ಷಗಳ ಬಳಿಕ ತನ್ನ ಶತಮಾನೋತ್ಸವವನ್ನು ಆಚರಿಸುವ ವೇಳೆಗೆ ಸಂಘಟನೆಯ ಗುರಿಯು ಪ್ರತಿ ಮನೆಯನ್ನು ತಲುಪಿರಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ.
ಸಂಘಟನೆಯ ಬೆಳವಣಿಗೆ ಅವಲೋಕನಕ್ಕಾಗಿ ಮೂರು ದಿನಗಳ ಭೇಟಿ ಅಂಗವಾಗಿ ಶುಕ್ರವಾರ ಜಾರ್ಖಂಡ್‌ನ ಧನಬಾದ್ ತಲುಪಿದ ಆರ್‌ಎಸ್‌ಎಸ್ ಮುಖ್ಯಸ್ಥರು, ಜಾರ್ಖಂಡ್ ಮತ್ತು ಬಿಹಾರದ ಹಿರಿಯ ನಾಯಕರೊಂದಿಗೆ ಸಭೆ ನಡೆಸಿದರು.
'ಸಂಘಟನೆಯು 2025ಕ್ಕೆ 100 ವರ್ಷಗಳನ್ನು ಪೂರೈಸುವ ವೇಳೆಗೆ, ಎಲ್ಲಾ ಗ್ರಾಮಗಳಲ್ಲಿ ಶಾಖೆಗಳ ವಿಸ್ತರಣೆಯೊಂದಿಗೆ ಸ್ವಯಂ ಸೇವಕರು ಪ್ರತಿ ಮನೆಗೂ ತಲುಪಬೇಕು. ಹೀಗೆ ಮಾಡಲು ಎಲ್ಲರೂ ಶ್ರಮವಹಿಸಬೇಕು ಎಂದು ಸಲಹೆ ನೀಡಿದ ಅವರು, ಆರ್‌ಎಸ್‌ಎಸ್ ಸದಸ್ಯರಿಗೆ ಅವರ ನಡವಳಿಕೆ ಹೇಗಿರಬೇಕು ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಅವರ ಜೀವನವನ್ನು ಹೇಗೆ ಮೀಸಲಿಡಬೇಕು ಎಂದು ತಿಳಿಸಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


